ಕನ್ನಡಿಗರ ಸಂಪರ್ಕ ಜಾಲ

ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ

Latest Activity

2 members updated their profile photos
2 minutes ago
Kannika HN is now friends with R.krishna and Venkatesh V
5 minutes ago
Shivamoga Jille mattu Taalokugalu. nimma nimma taalokugala samudaya seri. ellarigu tilisi.
10 minutes ago
sureshpadesur updated their profile
13 minutes ago
D Janardhan, SURESH BHAT, R.DhanaKumaraSwamy and 6 more joined ಕನ್ನಡಿಗರ ಸಂಪರ್ಕ ಜಾಲ
18 minutes ago
DAKSHINAKANNADA jille mattu taalokugalu
55 minutes ago
asha s left a comment for Manu
58 minutes ago
58 minutes ago
1 hour ago
1 hour ago
1 hour ago
1 hour ago
JyothiGowda.HN and shekar are now friends
1 hour ago
1 hour ago
TUMKUR JIILLEYA, taalokugala ning mattu orkut samudayagalannu serikolli. ellarigu tilisi.
1 hour ago
2 hours ago
Sowmya Ram is now friends with manjunath, Sudhakar, Mahesh and 2
2 hours ago
2 hours ago
suma A and rakesh are now friends
2 hours ago
Santosh PN added a photo
Pune nalli Kannada Rajyotsava ati abhimana haagu harshollasadinda acharisalaythu... Ayojakaru, Karnatak Sangh Pune
3 hours ago

RSS

"ತಮಂಧದ ಕೇಡು"----ಲೇ: ಅಮರೇಶ ನುಗಡೋಣಿ

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ ೧೯೬೦ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು.

ಊಳಿಗಮಾನ್ಯಸಂಸ್ಕೃತಿಯ ಮೂಲರೂಪ ಅರ್ಥಾತ್ classical model of feudal structure ಇದರ ಮುಖ್ಯ ಗುಣವೆಂದರೆ, ಶೋಷಿತನು ತನ್ನ ತನು ಹಾಗು ಮನವನ್ನಷ್ಟೇ ಅಲ್ಲ, ತನ್ನ ಆತ್ಮವನ್ನೂ ಸಹ ತನ್ನ ಯಜಮಾನನ ಊಳಿಗಕ್ಕೆ ಬೇಶರತ್ತಾಗಿ ಒಪ್ಪಿಸಿಬಿಟ್ಟಿರುತ್ತಾನೆ. ಇದಕ್ಕೆ ಪ್ರತಿಯಾಗಿ ಯಜಮಾನನು ದರ್ಪ, ದಬ್ಬಾಳಿಕೆ ಹಾಗು ಸರ್ವಸ್ವಾಮಿತ್ವವನ್ನು ಪ್ರದರ್ಶಿಸುತ್ತಾನೆ. ಇಂತಹ ತಮಂಧದ ಕೇಡಿನಿಂದ ಹೊರಬರಬೇಕಾದರೆ ಶಿಕ್ಷಣದ ಬೆಳಕು ಬೇಕು. ಆದರೆ ಈ ವ್ಯವಸ್ಥೆಯು ಅಂತಹ ಶಿಕ್ಷಿತ ಪ್ರತಿಭಟನಾಕಾರರನ್ನೂ ಸಹ ನಿರ್ದಾಕ್ಷಿಣ್ಯವಾಗಿ ಹೊಸಕಿ ಹಾಕಿ ಬಿಡುತ್ತದೆ.

ನುಗಡೋಣಿಯವರ "ತಮಂಧದ ಕೇಡು" ಎನ್ನುವ ಕತೆಯಲ್ಲಿ ದುರುಗ ಎನ್ನುವ ಜೀತದಾಳಿನ ದುಃಸ್ವಪ್ನದೊಂದಿಗೆ ಕತೆ ಪ್ರಾರಂಭವಾಗುತ್ತದೆ. ತನ್ನ ಒಡೆಯನಾದ ಶಾಂತಗೌಡನ ಜಮೀನಿನಲ್ಲಿರುವ ಎರಡು ದೊಡ್ಡ ಮರಗಳ ನಡುವೆ ಜೋಪಡಿ
ಹಾಕಿಕೊಂಡು, ದುರುಗ ತನ್ನ ಹೆಂಡತಿ ಚಂದವ್ವ ಹಾಗು ಜೋಳಿಗೆ ಕೂಸು ಚೆನ್ನಮಲ್ಲಪ್ಪನೊಂದಿಗೆ ಬದುಕು ಸಾಗಿಸುತ್ತಿದ್ದಾನೆ.
ಒಡೆಯನಿಗೆ ನಿಷ್ಠೆಯಿಂದ ದುಡಿಯುವದರಿಂದ ದುರುಗ ಶಾಂತಗೌಡನ ನೆಚ್ಚಿನ ಆಳಾಗಿದ್ದಾನೆ. ಶಾಂತಗೌಡ ‘ದುರುಗಾ’ ಎಂದು ಕೂಗಿದಾಗ, ದುರುಗನಿಗೆ ಇದು ಪುಣ್ಯದ ಕರೆಯಂತೆ ಕೇಳಿಸುವಷ್ಟು ಈತ ಶಾಂತಗೌಡನ ದಾಸನಾಗಿದ್ದಾನೆ.

ಇಂತಹ ದುರುಗನ ಚಂದದ ಹೆಂಡತಿ ಚಂದಮ್ಮನ ಮೇಲೆ ಶಾಂತಗೌಡನಿಗೆ ಮನಸ್ಸಾಗುತ್ತದೆ.


ಚಂದಮ್ಮ ತನ್ನ ದಣಿಗೆ ಪ್ರತಿಭಟನೆ ಇಲ್ಲದೆ ವಶವಾದಳು. ಆದರೆ ಈ ಕೆಂಡವನ್ನು ಮನದಲ್ಲಿಯೇ ಇಟ್ಟುಕೊಂಡಿರಲು ಅವಳಿಂದ ಸಾಧ್ಯವಾದೀತೆ? ಕೊನೆಗೊಮ್ಮೆ ತನ್ನ ಗಂಡ ದುರುಗನೆದುರಿಗೆ ಅವಳು ತನ್ನ ಸಂಕಟವನ್ನು ಬಿಚ್ಚಿಟ್ಟಳು. ದುರುಗನಾದರೋ ತನ್ನ ತನು, ಮನಗಳನ್ನು ತನ್ನ ದಣಿಗೆ ಒಪ್ಪಿಸಿಬಿಟ್ಟ ಊಳಿಗದಾಳು. ಆತ ಏನು ಮಾಡಿಯಾನು?

ತಪ್ಪು ಮಾಡಿದವನು ದಣಿ. ಆದರೆ ದುರುಗನೇ ಆತನ ಕಾಲಿಗೆ ಬಿದ್ದು ಅತ್ತು ಬಿಡುತ್ತಾನೆ! ತನ್ನ ಹೆಂಡತಿಯನ್ನು ಮರಳಿ ಕರೆ ತರುತ್ತಾನೆ. ಶಾಂತಗೌಡ ದಣಿಯ ಹಕ್ಕನ್ನು ದುರುಗನ ಹೆಂಡತಿಯ ಮೇಲೆ ಮರುಸ್ಥಾಪಿಸುತ್ತಾನೆ. ಇಷ್ಟಾದರೂ ದುರುಗ ಆ ಹಳ್ಳಿಯನ್ನು ಬಿಟ್ಟು, ತನ್ನ ದಣಿಯನ್ನು ಬಿಟ್ಟು ಬೇರೆಲ್ಲೂ ಹೋಗುವದಿಲ್ಲ! ಯಾಕೆಂದರೆ ಆತ ತನ್ನ ದಾಸ್ಯತ್ವವನ್ನು ಕಾಯಾ, ವಾಚಾ, ಮನಸಾ ಒಪ್ಪಿಕೊಂಡು ಬಿಟ್ಟಿದ್ದಾನೆ.
ಇತ್ತ ಚಂದಮ್ಮನೂ ಬಹಳ ದಿನ ಬದುಕುವದಿಲ್ಲ. ದುರುಗನ ಮಗ ಊರ ಮಗನಾಗಿ ಬೆಳೆದವನು ಹೆಚ್ಚಿನ ಕಲಿಕೆಗಾಗಿ ಶಹರಕ್ಕೆ ಹೋಗುತ್ತಾನೆ. ಯಜಮಾನ ಶಾಂತಗೌಡ ತನ್ನ ನೆಚ್ಚಿನ ಬಂಟನ ಮಗನ ಶಿಕ್ಷಣಕ್ಕೆ ಉದಾರವಾಗಿ ನೆರವು ನೀಡುತ್ತಾನೆ. ಚೆನ್ನಮಲ್ಲಪ್ಪ ಆ ಶಹರದ ಶಾಲೆಯಲ್ಲಿಯೇ ಶಿಕ್ಷಕನಾಗುತ್ತಾನೆ.

ಶಾಂತಗೌಡನ ಒಬ್ಬಳೇ ಸಂತಾನವಾದ ಅಕ್ಕಮಹಾದೇವಿ ಕಲಿಯಲೆಂದು ಶಹರದಲ್ಲಿಯೇ ಇದ್ದವಳು ಚೆನ್ನಮಲ್ಲಪ್ಪನಲ್ಲಿ ಅನುರಕ್ತಳಾಗುತ್ತಾಳೆ. ಈ ಆಘಾತಕಾರಿ ಸುದ್ದಿ ತನಗೆ ಬಂದು ಮುಟ್ಟಿದೊಡನೆಯೆ ದುರುಗ ನಿರ್ವಿಣ್ಣನಾಗಿ ತನ್ನ ಮಗನಿಗೆ ಬುದ್ಧಿ ಹೇಳುತ್ತಾನೆ. ಆ ಬುದ್ಧಿಮಾತಿನಲ್ಲೂ ಸಹ ಆತನ ದಾಸ್ಯಭಾವ ಹೇಗೆ ಮೇಲುಗೈಯಾಗಿದೆಯೆನ್ನುವದನ್ನು ನೋಡಿರಿ:



"ನನ್ಗ ಇಲ್ಲಿ ಬುಡಾದ ನಂಟದ" ಎಂದು ಹೇಳುವ ದುರುಗನಿಗೆ ಇರುವ ನಂಟು ಎಂತಹದು? ದುರುಗ ಇರುತ್ತಿದ್ದ ಮರಗಳ ನಡುವಿನ ಜೋಪಡಿ ಈಗಿಲ್ಲ. ಮರಮಟ್ಟುಗಳನ್ನು ಮಾಡಿಸಲು ಶಾಂತಗೌಡ ಆ ಮರಗಳನ್ನು ಕಡಿಸಿ ಹಾಕಿದ್ದಾನೆ. ದುರುಗನಿಗೆ ಹಾಗೂ ನೂರಾರು ಹಕ್ಕಿಗಳಿಗೆ ಆಸರೆಯಾಗಿದ್ದ ಆ ಮರಗಳು, ಯಜಮಾನಿಕೆಯ ಉಪಭೋಗಕ್ಕಾಗಿ ನಷ್ಟವಾಗಿವೆ. ದುರುಗ ಹಾಗು ಆ ಮರಗಳ ನಡುವೆ ಭಾವನಾತ್ಮಕ ಸಂಬಂಧವಿತ್ತು. ದುರುಗ ದೈನಾಸಪಡುತ್ತ ಆ ಮರಗಳನ್ನು ಉಳಿಸಲು ಶಾಂತಗೌಡನಿಗೆ ಬೇಡಿಕೊಳ್ಳುವದು ಹೀಗೆ:

ಇದಕ್ಕೆ ಪ್ರತಿಯಾಗಿ ಶಾಂತಗೌಡನಲ್ಲಿರುವದು ದರ್ಪ ಹಾಗು ಸಿಟ್ಟಿನ ಸ್ವಭಾವ. ಎಲ್ಲವೂ ತನಗಾಗಿಯೇ, ತನ್ನ ಉಪಭೋಗಕ್ಕಾಗಿಯೇ ಇರುವದು ಎನ್ನುವ ಅಹಂಭಾವ. (‘ಶಾಂತಗೌಡ’ ಎನ್ನುವ ಹೆಸರಿನ ಅಸಂಗತತೆಯನ್ನು ಗಮನಿಸಿರಿ.) ದುರುಗನ ಮೇಲಿನ ತನ್ನ ಸಿಟ್ಟನ್ನು ಆತ ಇತರ ಆಳುಗಳ ಮೇಲೆ ಹಾಗು ಜಾನುವಾರುಗಳ ಮೇಲೆ ತಿರುಗಿಸುವದರ ವರ್ಣನೆ ಹೀಗಿದೆ:


ಶಾಂತಗೌಡ ಹೊಳೆಯ ಈಚೆಯ ಹಳ್ಳಿಯಲ್ಲಿದ್ದರೆ, ಹೊಳೆಯ ಆಚೆಯ ಬದಿಯಲ್ಲಿ ಅವನ ಅಕ್ಕ ಇದ್ದಾಳೆ. ವಿಧವೆಯಾದ ಮೇಲೆ
ತಾನೇ ಜಮೀನುದಾರಿಕೆಯನ್ನು ಗೌಡತಿಯ ಎಲ್ಲಾ ಗತ್ತಿನೊಂದಿಗೆ ನಡೆಯಿಸಿಕೊಂಡು ಹೋಗುತ್ತಿದ್ದಾಳೆ. ಸೇತುವೆ ಇಲ್ಲಿ ಇಲ್ಲದ್ದರಿಂದ ದುರುಗನೇ ಶಾಂತಗೌಡನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೊಳೆ ದಾಟಿಸುತ್ತಿದ್ದ.

ಶಾಂತಗೌಡನ ಮಗಳನ್ನು ತನ್ನ ಸೊಸೆಯನ್ನಾಗಿ ಮಾಡಿಕೊಂಡರೆ, ತಮ್ಮನ ಆಸ್ತಿ ಎಲ್ಲ ತನಗೇ ಬರುವದೆನ್ನುವ ಒಳ ಆಸೆ ಈ ಅಕ್ಕನಿಗಿದೆ. ಆದರೆ ಅಕ್ಕಮಹಾದೇವಿ ಊಳಿಗದ ಆಳಾದ ದುರುಗನ ಮಗ ಚೆನ್ನಮಲ್ಲಪ್ಪನಲ್ಲಿ ಅನುರಕ್ತಳಾಗಿದ್ದಾಳೆ. ಶಾಂತಗೌಡನು ದುರುಗನ ಹೆಗಲ ಮೇಲೆ ಸವಾರಿ ಮಾಡಿಕೊಂಡು, ಹೊಳೆ ದಾಟಿ ತನ್ನ ಅಕ್ಕನಿದ್ದಲ್ಲಿಗೆ ಬಂದು ಅವಳೊಡನೆ ಈ ಸಮಸ್ಯೆಯ ಬಗೆಗೆ ಆಪ್ತಾಲೋಚನೆ ಮಾಡುತ್ತಾನೆ.

ಯಜಮಾನಸಂಸ್ಕೃತಿಯ ಪಟ್ಟದಲ್ಲಿರುವ ವ್ಯಕ್ತಿಗೆ ತನ್ನ ಪಟ್ಟದ ಭದ್ರತೆಯೊಂದೇ ಮುಖ್ಯ. ಸ್ವಾರ್ಥಸಾಧನೆಯ ಕ್ರೌರ್ಯ ಈ ವ್ಯಕ್ತಿಯ ಅಂತರಾಳದಲ್ಲಿ ಲಿಂಗಭೇದವಿಲ್ಲದೇ ಹುದುಗಿರುತ್ತದೆ. ತನ್ನ ತಮ್ಮನಿಗೆ ಅವಳು ಕೊಡುವ ಸಲಹೆಯು ಅವಳ ತಮ್ಮನನ್ನೂ ಸಹ ಒಂದು ನಿಮಿಷ ನಡುಗಿಸಿ ಬಿಡುತ್ತದೆ:

ಶಾಂತಗೌಡ ಹಳ್ಳಿಗೆ ಮರಳುವಾಗ ಮತ್ತೆ ದುರುಗನ ಮೇಲೆ ಸವಾರಿ ಮಾಡಿ ಹೊಳೆ ದಾಟಬೇಕು. ಹೊಳೆ ದಾಟುವಾಗ ತನ್ನ ದಣಿಯನ್ನು ಹೊಳೆಯಲ್ಲಿ ಮುಳುಗಿಸಿಬಿಡುವದು ದುರುಗನಿಗೆ ಸುಲಭವಾದ ಕೆಲಸ; ಆದರೆ ಸರಳವಾದ ಕೆಲಸವಲ್ಲ. ಯಾಕೆಂದರೆ ಜೀತದಾಳಾದ ಆತನು ತನ್ನ ಒಡೆಯನ ಕೇಡನ್ನು  ಕನಸುಮನಸಿನಲ್ಲೂ ಎಣಿಸಲಾರ. ದುರುಗನ ಮನದಲ್ಲಿ ನಡೆದ ತುಮುಲದ ವರ್ಣನೆಯನ್ನು ನುಗಡೋಣಿಯವರು ಈ ರೀತಿಯಾಗಿ ಮಾಡಿದ್ದಾರೆ:

ನುಗಡೋಣಿಯವರ ವೈಶಿಷ್ಟ್ಯವೆಂದರೆ, ಅವರು ಶೋಷಿತನ ಬವಣೆಯ ವರ್ಣನೆಗಿಂತ, ಶೋಷಣಾವ್ಯವಸ್ಥೆಯ ಚಿತ್ರಣಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ. ಇಲ್ಲಿ ದರ್ಪವೇ ಮೂರ್ತಿವೆತ್ತ ಯಜಮಾನ ಹಾಗು ದಾಸ್ಯವೇ ಮೂರ್ತಿವೆತ್ತ ಊಳಿಗದಾಳನ್ನು ಕಾಣುತ್ತೇವೆ.
ಈ ಶೋಷಣಾವ್ಯವಸ್ಥೆಯಲ್ಲಿ ಯಜಮಾನನ ಮನೆತನಕ್ಕೊಬ್ಬ ಹಿತಚಿಂತಕ ಗುರುಗಳೂ ಇರುತ್ತಾರೆ. ಆದರೆ ಬುದ್ಧಿ ಹೇಳುವ ಶಕ್ತಿ ಅವರಿಗಿರುವದಿಲ್ಲ. ಇಂತಹ ಕತೆಗಳ ಅನಿವಾರ್ಯ ದುರಂತವನ್ನು ನಿರ್ಲಿಪ್ತ ಶೈಲಿಯಲ್ಲಿ ಚಿತ್ರಿಸುವದು ನುಗಡೋಣಿಯವರ ಹೆಗ್ಗಳಿಕೆ.

ಪತ್ರಿಕಾಪ್ರದೂಷಣ

ಉತ್ತರ ಕರ್ನಾಟಕದಲ್ಲಿ  ರಾಜಕೀಯ ಹಾಗೂ ಸಾಮಾಜಿಕ ಜಾಗೃತಿಯ ಉದ್ದೇಶದಿಂದ ೧೯೩೩ನೆಯ ಇಸವಿಯಲ್ಲಿ , ‘ಸಂಯುಕ್ತ ಕರ್ನಾಟಕ’ ಪತ್ರಿಕೆಯು ಬೆಳಗಾವಿಯಲ್ಲಿ ಪ್ರಾರಂಭವಾಯಿತು. ಅನೇಕ ವರ್ಷಗಳವರೆಗೆ ಈ ಪತ್ರಿಕೆಯು ತನ್ನ ಆದರ್ಶ ಮತ್ತು ಧ್ಯೇಯಗಳಿಗೆ ಅನುಸಾರವಾಗಿ ಅತ್ಯುತ್ತಮ ಕೆಲಸವನ್ನು ಮಾಡಿತು. ಈ ಪತ್ರಿಕೆಯ ಪೂರ್ವಕಾಲದ ಸಂಪಾದಕರಾದ ಮೊಹರೆ ಹಣಮಂತರಾಯರು, ಹ.ರಾ.ಪುರೋಹಿತರು ಹಾಗು ಸಂಪಾದಕವರ್ಗದಲ್ಲಿದ್ದ ಪಾ.ವೆಂ.ಆಚಾರ್ಯರು ಇವರೆಲ್ಲ ತಮ್ಮ ಶ್ರದ್ಧೆ ಹಾಗು ನಿಷ್ಠೆಯ ಪರಿಶ್ರಮದಿಂದ ಪತ್ರಿಕೆಯನ್ನು ಉನ್ನತ ಮಟ್ಟಕ್ಕೆ ತಲುಪಿಸಿದರು.

ಕನ್ನಡದಲ್ಲಿ ಪತ್ರಿಕೆಗಳು ಬಳಸಬಹುದಾದ ಪ್ರಮಾಣಿತ ಪದಗಳು ಇನ್ನೂ ಇರದಂತಹ ಆ ಸಮಯದಲ್ಲಿ ‘ಸಂಯುಕ್ತ ಕರ್ನಾಟಕ’ವು ಇಂತಹ ಪತ್ರಿಕಾಪದಗಳನ್ನು ಅಂದರೆ standard journalistic terminologyಯನ್ನು ರೂಪಿಸಿತು. ಇದು ಪತ್ರಿಕಾಭಾಷೆಗೆ ‘ಸಂಯುಕ್ತ ಕರ್ನಾಟಕ’ವು ನೀಡಿದ ದೊಡ್ಡ ಕೊಡುಗೆಯಾಗಿದೆ.

ಒಂದು ಕಾಲದಲ್ಲಿ ಪತ್ರಿಕೋದ್ಯಮವು ಲೋಕಶಿಕ್ಷಣದ ಸಾಧನವಾಗಿತ್ತು. ಇಂದು ಅದು ದೊಡ್ಡ ಉದ್ದಿಮೆಯಾಗಿದೆ. ಈ ಉದ್ದಿಮೆಯಲ್ಲಿ ಭಾಷೆಗೆ, ವ್ಯಾಕರಣಕ್ಕೆ ಅಥವಾ ಕಾಗುಣಿತಕ್ಕೆ ಏನೂ ಬೆಲೆ ಇಲ್ಲವೇನೋ ಎನ್ನುವ ಕಳವಳವು ‘ಸಂಯುಕ್ತ ಕರ್ನಾಟಕ’ದ ಓದುಗರನ್ನು ಬಾಧಿಸುತ್ತದೆ. ‘ಸಂಯುಕ್ತ ಕರ್ನಾಟಕ’ದ ನಿಯಮಿತ ಓದುಗನಾದ ನನಗೆ, ಈ ನನ್ನ ಪ್ರಿಯ ಪತ್ರಿಕೆಯಲ್ಲಿ ಐದು ನಮೂನೆಯ ತಪ್ಪುಗಳು ಕಂಡು ಬರುತ್ತಿವೆ. ಇವುಗಳನ್ನು ‘ಪತ್ರಿಕಾಪ್ರಪಂಚದ ಪಂಚ ಮಹಾಪಾತಕ’ಗಳು ಎಂದು ಕರೆದರೆ ತಪ್ಪಿಲ್ಲ. ಇದರಿಂದ ದುಃಖಿತನಾದ ನಾನು ನನ್ನ ಚಡಪಡಿಕೆಯನ್ನು ನಿಮ್ಮೊಡನೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ನನ್ನ ತಿಳಿವಳಿಕೆಯಲ್ಲಿಯೇ ತಪ್ಪಿದ್ದರೆ, ದಯವಿಟ್ಟು ನನ್ನನ್ನು  ತಿದ್ದಲು ಕೋರಿಕೊಳ್ಳುತ್ತೇನೆ.

(೧) ಕಾಗುಣಿತದ ತಪ್ಪುಗಳು:
ಕಾಗುಣಿತದ ತಪ್ಪುಗಳು ಅತ್ಯಂತ ಪ್ರಾಥಮಿಕ ತಪ್ಪುಗಳು. ಅಚ್ಚುಮೊಳೆಗಳನ್ನು ಜೋಡಿಸಿ ಪತ್ರಿಕೆಗಳನ್ನು ಮುದ್ರಿಸುವ ಕಾಲವೊಂದಿತ್ತು. ಅಂತಹ ಸಮಯದಲ್ಲಿಯೂ ಸಹ ಮುದ್ರಣದೋಷಗಳು ವಿರಳವಾಗಿದ್ದವು. ಗಣಕಯಂತ್ರದ ಬಳಕೆ ಮಾಡುವ ಈ ಕಾಲದಲ್ಲಿ ಕಾಗುಣಿತದ ತಪ್ಪುಗಳು ಹೇರಳವಾಗಿ ಕಂಡುಬರುವದು ಆಘಾತಕರವಾಗಿದೆ. ಒಂದು ಪರಿಚ್ಛೇದದಲ್ಲಿ ಅಥವಾ ಒಂದು ಪುಟದಲ್ಲಿ ಕಾಗುಣಿತದ ಎಷ್ಟು ತಪ್ಪುಗಳು ಕಂಡು ಬರಬಹುದು? ‘ಸಂಯುಕ್ತ ಕರ್ನಾಟಕ’ದ ಒಂದೇ ಪುಟದಲ್ಲಿ ನಾನು ಸ್ವೈಚ್ಛಿಕ ಅವಲೋಕನ ಮಾಡಿದಾಗ ಹನ್ನೊಂದು ತಪ್ಪುಗಳು ಕಂಡು ಬಂದವು. ಇವು ಅಚ್ಚಿನ ದೋಷಗಳಲ್ಲ ; ಆದರೆ ಕಾಗುಣಿತದ ತಪ್ಪುಗಳು ಎನ್ನುವ ಸಂಗತಿಯನ್ನು ನಾನು ವಿಷಾದಪೂರ್ವಕವಾಗಿ ನಿಮ್ಮ ಗಮನಕ್ಕೆ ತರಬಯಸುತ್ತೇನೆ. ನಾನು ತಿಳಿದಂತಹ ಕೆಲವು ತಪ್ಪುಗಳನ್ನು ಉದಾಹರಣೆಗೆಂದು ನಿಮ್ಮ ಮುಂದೆ ಇಡುತ್ತಿದ್ದೇನೆ. Standard News Paper ಎಂದು ಭಾವಿಸಲಾದ ಪತ್ರಿಕೆಯಲ್ಲಿ ಇಷ್ಟು ತಪ್ಪುಗಳು ಕಾಣಬಾರದು, ಅಲ್ಲವೆ?

ದಿನಾಂಕ                                ತಪ್ಪು                     ಒಪ್ಪು
೨೩--೯-೦೯                           ಸ್ಕೈಐವಿಂಗ್                   ಸ್ಕೈಡೈವಿಂಗ್
೨೩--೯-೦೯                           ಶೀಖರ                           ಶಿಖರ
೨೬-೯-೦೯                            ವಿಶಿಷ್ಠ                          ವಿಶಿಷ್ಟ
೨೬-೯-೦೯                            ದಿಕ್ಷಿತಲು                        ದೀಕ್ಷಿತರು
೨೬-೯-೦೯                            ಪ್ರೀಟಿ                            ಪ್ರೀತಿ
೨೬-೯-೦೯                            ನಿಗಧಿತ                          ನಿಗದಿತ
೨೬-೯-೦೯                             ಸ್ಕಂಧ್                         ಸ್ಕಂದ
೨೬-೯-೦೯                            ಮಾಲಿದ್ದಾರೆ                  ಮಾಡಲಿದ್ದಾರೆ
೨೬-೯-೦೯                            ಎದು                             ಎಂದು
೨೬-೯-೦೯                            ಪ್ರೊಬೆಷನರಿ                     ಪ್ರೊಬೇಷನರಿ
೨೬-೯-೦೯                             ಪರಿಶಿಷ್ಠ                        ಪರಿಶಿಷ್ಟ
೨೭-೯-೦೯                            ದಿಗ್ಭಂದನ                       ದಿಗ್ಬಂಧನ
೨೭-೯-೦೯                            ಹಲ್ಯೆಯನ್ನು                   ಹಲ್ಲೆಯನ್ನು
೨೭-೯-೦೯                            ಪರೀಶಿಲಿಸಿ                       ಪರಿಶೀಲಿಸಿ
೨೭-೯-೦೯                            ಘಂಟೇಪ್ಪನವರ                ಘಂಟೆಪ್ಪನವರ
೨೭-೯-೦೯                            ಅದಿಕಾರಿಗಳಲ್ಲಿ                 ಅಧಿಕಾರಿಗಳಲ್ಲಿ
೨೭-೯-೦೯                            ವಿಶ್ವಬ್ಯಾಂಕನಂಥ              ವಿಶ್ವಬ್ಯಾಂಕನಂತಹ
೨೯-೯-೦೯                            ಬ್ರೀಜ್                           ಬ್ರಿಜ್
೨೯-೯-೦೯                             ಮಥ                             ಮೃತ
೨೯-೯-೦೯                            ಹರ್ಷೋದ್ಘಾರ                ಹರ್ಷೋದ್ಗಾರ
೨೯-೯-೦೯                            ಸ್ತಬ್ದ                             ಸ್ತಬ್ಧ
೨೯-೯-೦೯                            ಕೈಗೂಳ್ಳುವದಾಗಿ              ಕೈಗೊಳ್ಳುವದಾಗಿ
೨೯-೯-೦೯                            ಅನಿಷ್ಠಾನ                        ಅನುಷ್ಠಾನ
೨೯-೯-೦೯                            ಅಂಕೀತ                            ಅಂಕಿತ
೨೯-೯-೦೯                             ಹರಿಸಿದ್ದಾರೆ                     ಹರಸಿದ್ದಾರೆ.
೨೯-೯-೦೯                            ಶುಭಾಷಯ                       ಶುಭಾಶಯ
೨೯-೯-೦೯                           ವಿಜಯದಶಿಮಿ                    ವಿಜಯದಶಮಿ
೨೯-೯-೦೯                           ಅವ್ವಾಹತವಾಗಿ                  ಅವ್ಯಾಹತವಾಗಿ
೨೯-೯-೦೯                            ಪುನಶ್ಛೇತನ                      ಪುನಶ್ಚೇತನ
೨೯-೯-೦೯                           ವಿಶಿಷ್ಠ                              ವಿಶಿಷ್ಟ
೩೦-೯-೦೯                           ಅನುಷ್ಟಾನ                         ಅನುಷ್ಠಾನ
೩೦-೯-೦೯                            ಮಧ್ಯಾನ್ಹದಿಂದ                 ಮಧ್ಯಾಹ್ನದಿಂದ
೩೦-೯-೦೯                           ಕಾಲ್ಕಿತಿತ್ತು                         ಕಾಲ್ಕಿತ್ತಿತು

(೨) ವ್ಯಾಕರಣದೋಷಗಳು:
ಕಾಗುಣಿತದ ತಪ್ಪುಗಳನ್ನು ಅಚ್ಚಿನ ದೋಷಗಳೆಂದು ಹೇಳಿ ಪಾರಾಗಬಹುದು. ಆದರೆ ವ್ಯಾಕರಣದ ತಪ್ಪುಗಳಿಗೆ ಯಾರು ಹೊಣೆ? ತಮ್ಮಲ್ಲಿ ಪರಿಶೀಲನೆಗೆ ಬಂದಂತಹ ವರದಿಗಳನ್ನು ಸಂಪಾದಕರು ಕಣ್ಣು ಮುಚ್ಚಿಕೊಂಡು ಓದುತ್ತಾರೆಯೆ? ಅಥವಾ ಕನ್ನಡ ವ್ಯಾಕರಣವನ್ನು ಚಿತ್ರಹಿಂಸೆಗೆ ಒಳಪಡಿಸುತ್ತಿರುವಾಗ ಇವರಿಗೆ ಏನೂ ನೋವಾಗುವದಿಲ್ಲವೆ? ಇದು ಸಂಪಾದಕರ ಹೊಣೆಗಾರಿಕೆ ಅಲ್ಲವೆ? ವ್ಯಾಕರಣದ ಮೃಗಯಾವಿಹಾರದ ಕೆಲವೊಂದು ಉದಾಹರಣೆಗಳು ಹೀಗಿವೆ:

೨೬-೯-೦೯
(೧)ತಪ್ಪು: ಮಳೆಗೆ ಕೋಟ್ಯಂತರ ಆಸ್ತಿ ನಷ್ಟ
ಒಪ್ಪು: ಮಳೆಯಿಂದ ಕೋಟ್ಯಂತರ ಆಸ್ತಿ ನಷ್ಟ
(೨) ತಪ್ಪು: ಮಿಷಿನ್ ಗಳ
ಒಪ್ಪು: ಮಶೀನುಗಳ
೨೭-೯-೦೯
(೧) ತಪ್ಪು: ಸೂಕ್ತ ಆರೋಪಿಗಳನ್ನು
ಒಪ್ಪು: ನೈಜ ಅಪರಾಧಿಗಳನ್ನು
(ಟಿಪ್ಪಣಿ: ಸೂಕ್ತ ಎಂದರೆ ವಿಧಿ-ವಿಧಾನಗಳಲ್ಲಿ ಹೇಳಿದ ಮೇರೆಗೆ ಎಂದು ಅರ್ಥ.
ಆರೋಪಿಗಳು ಅಪರಾಧಿಗಳಾಗಿರಬೇಕಿಲ್ಲ.)
(೨) ತಪ್ಪು: ಬೆಳಗ್ಗೆ ನಿಲ್ದಾಣಕ್ಕೆ ಆಗಮಿಸಿತ್ತು.
ಒಪ್ಪು: ಬೆಳಗಿನ ಸಮಯದಲ್ಲಿ ನಿಲ್ದಾಣಕ್ಕೆ ಆಗಮಿಸಿತ್ತು.
(೩) ತಪ್ಪು: ಅಂತಾರಾಷ್ಟ್ರೀಯ (=inland)
ಒಪ್ಪು: ಅಂತರರಾಷ್ಟ್ರೀಯ (=international)
೨೯-೯-೦೯
(೧) ತಪ್ಪು: ಪೋಲೀಸ ಠಾಣೆ ಸಂಪರ್ಕಿಸಲು
ಒಪ್ಪು: ಪೋಲೀಸ ಠಾಣೆಯನ್ನು ಸಂಪರ್ಕಿಸಲು
(೨) ತಪ್ಪು: ಜನತೆ ದಸರಾ ಹಬ್ಬವನ್ನು ಆಚರಿಸಿದರು
ಒಪ್ಪು: ಜನತೆ ದಸರಾ ಹಬ್ಬವನ್ನು ಆಚರಿಸಿತು (ಅಥವಾ, ಜನರು .....ಆಚರಿಸಿದರು.)
(೩) ತಪ್ಪು: ಶುಭ್ರವರ್ಣದ ಹೊಸ ಬಟ್ಟೆಗಳನ್ನು
ಒಪ್ಪು: ಶುಭ್ರವಾದ ಹೊಸ ಬಟ್ಟೆಗಳನ್ನು
(ಟಿಪ್ಪಣಿ: ಶುಭ್ರ=ಸ್ವಚ್ಛ. ವರ್ಣ ಶುಭ್ರವಾಗಿರುವದೊ ಅಥವಾ ಬಟ್ಟೆ ಶುಭ್ರವಾಗಿರುವದೊ?)

(೩) ಭಾಷೆಯ ತಪ್ಪುಗಳು:
ವ್ಯಾಕರಣವು ಸಂಪಾದಕರಿಗೆ ಮಹತ್ವದ ವಿಷಯವೆಂದು ಅನ್ನಿಸಿರಲಿಕ್ಕಿಲ್ಲ ಎಂದು ಭಾವಿಸೋಣ. ಆದರೆ ಭಾಷೆಯ ತಪ್ಪು ಮಾತ್ರ ಒಂದು ಪತ್ರಿಕೆಯು ಎಂದೂ ಮಾಡಬಾರದ ತಪ್ಪು. ಓದುಗರನ್ನು ಸುಶಿಕ್ಷಿತರನ್ನಾಗಿ ಮಾಡುವದು ಯಾವುದೇ ಪತ್ರಿಕೆಯ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ. ಪತ್ರಿಕೆಯ ಭಾಷೆಯನ್ನು ಪ್ರಮಾಣಿತ ಭಾಷೆ ಎಂದು ಗ್ರಹಿಸಿಕೊಳ್ಳುವ ಓದುಗರು ಭಾಷಾದೋಷಗಳನ್ನು ಅರಿಯದೇ ಅಂತರ್ಗತಗೊಳಿಸಿಕೊಳ್ಳುತ್ತಾರೆ. ಆ ತಪ್ಪುಗಳನ್ನು ತಾವೂ ಎಲ್ಲೆಡೆ ಹರಡುತ್ತಾರೆ. ಇದರಿಂದ ಾಷಾದೋಷವು ಸರ್ವವ್ಯಾಪಿಯಾಗಿ ಬಿಡುತ್ತದೆ. ‘ಸಂಯುಕ್ತ ಕರ್ನಾಟಕ’ದಲ್ಲಿಯ ಕೆಲವು ಭಾಷಾದೋಷಗಳನ್ನು ಗಮನಿಸೋಣ:
"ಸಾರ್ವಜನಿಕ ಸ್ಥಳದಲ್ಲಿ ಗುಡಿ ನಿರ್ಮಾಣಕ್ಕೆ ಸುಪ್ರೀಂ ನಿರ್ಬಂಧ" ಎನ್ನುವ ಈ ವರದಿಯನ್ನು ನೋಡಿರಿ. ಸಂಯುಕ್ತ ಕರ್ನಾಟಕವು ಹಾಗೂ ಇತರ ಪತ್ರಿಕೆಗಳು ಅನೇಕ ವರ್ಷಗಳಿಂದ ‘ಸರ್ವೋಚ್ಚ ನ್ಯಾಯಾಲಯ’ ಎನ್ನುವ ಪದವನ್ನು ಬಳಸುತ್ತಲೇ ಬಂದಿವೆ. ಈ ಪದವು ಕನ್ನಡ ಓದುಗರಿಗೆ ಅರ್ಥವಾಗುವಂತಹ ಪದವೇ ಆಗಿದೆ. ಏಕಾಏಕಿಯಾಗಿ ಈ ಪದಕ್ಕೆ ಬದಲಾಗಿ  ‘ಸುಪ್ರೀಂ ಕೋರ್ಟ’ ಎನ್ನುವ ಆಂಗ್ಲ ಪದ ಬಳಸುವ ಅನಿವಾರ್ಯತೆಯನ್ನು ಸಂಪಾದಕರೇ ಹೇಳಬೇಕು! ಸರಿ ಬಿಡಿ, ಯಾವುದೋ ಗಡಿಬಿಡಿಯಲ್ಲಿ ಸಂಪಾದಕರು ಕನ್ನಡ ಪದ ನನಪಾಗದೇ ಆಂಗ್ಲ ಪದವನ್ನು ಉಳಿಸಿಕೊಂಡರು ಎಂದುಕೊಳ್ಳೋಣ. ಆದರೆ ಕನ್ನಡ ವಾಕ್ಯದ ಮಧ್ಯಭಾಗದಲ್ಲಿ ಆಂಗ್ಲ ಪದಪುಂಜವನ್ನು ಬಳಸಿಕೊಳ್ಳುವದರ ಕಾರಣವೇನು? ಮನೋರಮೆಯು ಮುದ್ದಣನಿಗೆ ಹೇಳುವಂತೆ ಇದು ಮುತ್ತಿನ ಸರದಲ್ಲಿ ಮೆಣಸನ್ನು ಪೋಣಿಸಿದಂತೆ ಅಲ್ಲವೆ? ಉದಾಹರಣೆಯನ್ನು ನೋಡಿರಿ:
"ಸದಾ ಮಂತ್ರಿಗಳ ಕಾರುಬಾರಿನಲ್ಲಿದ್ದ ವಿಧಾನಸೌಧ ಇಂದು ಫಾರ್ ಎ ಚೇಂಜ್ ಅಧಿಕಾರಿಗಳ ದರ್ಬಾರಿನಲ್ಲಿ ಕಾಲ ಕಳೆಯುವಂತಾಗಿತ್ತು."
ಸಂಪಾದಕರು ಓದುಗರೊಡನೆ ಹರಟೆ ಹೊಡೆಯುವ ಧಾಟಿಯಲ್ಲಿ ಸುದ್ದಿಯನ್ನು ಹೇಳುತ್ತಿದ್ದಾರೆಂದರೆ, ಈ ಶೈಲಿಯನ್ನು ಒಪ್ಪಿಕೊಳ್ಳಬಹುದು. ಆದರೆ ಗಂಭೀರ ವರದಿಗೆ ಇದು ತಕ್ಕ ಧಾಟಿಯೆನಿಸುವದಿಲ್ಲ.

ಅಕ್ಟೋಬರ ೧೧ರಂದು ಪ್ರಕಟವಾದ ವರದಿಯ ಭಾಷೆ ಇನ್ನೂ ವಿಚಿತ್ರವಾಗಿದೆ:
ಈ ವರದಿಯ ಮೊದಲನೆಯ ದೋಷವೆಂದರೆ ‘ಸವದತ್ತಿ’ಯನ್ನು ‘ಸೌಂದತ್ತಿ’ ಎಂದು ಗ್ರಾಮ್ಯವಾಗಿ ಬರೆದಿದ್ದು. ಈ ವರದಿಯ  ಪರಿಚ್ಛೇದ ಒಂದರ ಕೊನೆಯ ಸಾಲು ಹೀಗಿದೆ:
"ಇತ್ತೀಚೆಗೆ ಸುರಿದ ದಾರಕಾರ ಮಳೆಯ ಕೊನೆಯ ದಿನ ತನ್ನ ಕಿರಿಯ ಮಗನ ಮಾತು ನಿರ್ಲಕ್ಷಿಸಿ ಪ್ರತಿದಿನ ಸ್ಥಳದಲ್ಲಿ ಮಲಗಿಕೊಂಡಿದ್ದರೆ ಆತನ ಕುಟುಂಬಕ್ಕೆ ಇಂದು ಬೆಳಕು ಕಾಣುತ್ತಿರಲಿಲ್ಲ."
ಅರ್ಥವಾಯಿತೆ? ಸ್ವಲ್ಪ ತಿಣುಕಾಡಿದರೆ ಅರ್ಥ ಮಾಡಿಕೊಳ್ಳುವದು ಕಷ್ಟವೇನಲ್ಲ. ಆದರೆ ಸರಿಯಾದ ವಾಕ್ಯ ಹೀಗಿರಬೇಕಿತ್ತು:
"ಇತ್ತೀಚೆಗೆ ಸುರಿದ ಧಾರಾಕಾರ ಮಳೆಯ ಕೊನೆಯ ದಿನ ತನ್ನ ಕಿರಿಯ ಮಗನ ಮಾತನ್ನು ನಿರ್ಲಕ್ಷಿಸಿ ಪ್ರತಿ ದಿನದಂತೆಯೆ ಮಲಗಿಕೊಂಡಿದ್ದರೆ, ಆತನ ಕುಟುಂಬವು ಇಂದು ಬೆಳಕನ್ನು ಕಾಣುತ್ತಿರುತ್ತಿಲ್ಲ."

(೪) ವರದಿಯ ದೋಷಗಳು:
ವರದಿಯ ದೋಷಗಳಿಗಾಗಿ ಈ ವರದಿಗಳನ್ನು ನೋಡಬಹುದು:
ಮೊದಲನೆಯ ವರದಿ ‘ಸಂಯುಕ್ತ ಕರ್ನಾಟಕ’ದಲ್ಲಿ ಸಪ್ಟಂಬರ ೩೦ರಂದು ಮೂರನೆಯ ಪುಟದಲ್ಲಿ ಪ್ರಕಟವಾಗಿದೆ. ಒಳ್ಳಯ ವರದಿಗೆಬೇಕಾದ ನಿಖರತೆ ಹಾಗೂ ಸಂಕ್ಷಿಪ್ತತೆಯ ಬದಲಾಗಿ ಜೊಳ್ಳು ಜೊಳ್ಳಾದ ವರ್ಣನೆ ಇಲ್ಲಿದೆ ಎಂದು ನನ್ನ ಅನಿಸಿಕೆ.


"ಜಿಲ್ಲೆಯಾದ್ಯಂತ ಇಂದು ಮಧ್ಯಾನ್ಹದಿಂದ ಬಿಟ್ಟುಬಿಡದೇ ಮಳೆ ಸುರಿದ ಹಿನ್ನೆಲೆಯಲ್ಲಿ ಎಲ್ಲೆಡೆ ನೀರೇ ನೀರು." ಎಂದು ಈ ವರದಿ ಪ್ರಾರಂಭವಾಗುತ್ತದೆ.
ಧಾರವಾಡ ಜಿಲ್ಲೆಯಲ್ಲಿ ಐದು ತಾಲೂಕುಗಳಿವೆ. ಕಲಘಟಗಿಯಂತಹ ಮಲೆನಾಡು ಹಾಗೂ ನವಲಗುಂದದಂತಹ ಬಯಲಸೀಮೆ ಈ ಜಿಲ್ಲೆಯಲ್ಲಿವೆ. ಇವುಗಳ ನಡುವಿನ ನೇರ ಅಂತರವು ಸುಮಾರು ೬೦ ಕಿಲೊಮೀಟರುಗಳಷ್ಟಾದರೂ ಇದ್ದೀತು. ’ಇಲ್ಲೆಲ್ಲಾ ಮಳೆ ಇಂದು ಮಧ್ಯಾಹ್ನವೇ ಪ್ರಾರಂಭವಾಯಿತೆ’, ಎನ್ನುವ ಸಂದೇಹ ಓದುಗನಿಗೆ ಬಾರದಿರದು. ಪತ್ರಿಕೆಯು ಇಂತಹ ಸಂದರ್ಭಗಳಲ್ಲಿ ಸಂದಿಗ್ಧ ಭಾಷೆಯನ್ನು ಬಳಸಬಾರದು. ಎರಡನೆಯದಾಗಿ ಮಳೆ ಸುರಿದದ್ದು ಹಿನ್ನೆಲೆಯಾಗುವದಿಲ್ಲ, ಕಾರಣವಾಗುತ್ತದೆ. ಈಗ ಈ ವಾಕ್ಯದ ವ್ಯಾಕರಣದ ತಪ್ಪುಗಳನ್ನಷ್ಟು ಗಮನಿಸಿರಿ: ‘ಮಧ್ಯಾಹ್ನ’ ಪದವನ್ನು ‘ಮಧ್ಯಾನ್ಹ’ ಎಂದು ಬರೆಯಲಾಗಿದೆ. ’ಬಿಟ್ಟೂಬಿಡದೆ’ ಎನ್ನುವದನ್ನು ‘ಬಿಟ್ಟುಬಿಡದೇ’ ಎಂದು ಬರೆಯಲಾಗಿದೆ.

ಈ ಒಂಟಿ ಸಾಲಿನ ಮುಂದಿನ ಪರಿಚ್ಛೇದವನ್ನು ಈಗ ಗಮನಿಸಿರಿ:
"ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ನಂತರ ಮಧ್ಯಾನ್ಹ 2ರ ಸುಮಾರಿಗೆ ಸಣ್ಣಗೆ ಸುರಿಯುತ್ತಿದ್ದ ಮಳೆ ಒಮ್ಮಿಂದೊಮ್ಮೆಲೇ ಜೋರಾಗಿ ಸುರಿಯಲು ಪ್ರಾರಂಭಿಸಿತು. ಮಳೆ ಬೀಳುವ ಸಂದರ್ಭದಲ್ಲಿ ಗಾಳಿಯೂ ಬೀಸುತ್ತಿರಲಿಲ್ಲ."
ಮೊದಲನೆಯದಾಗಿ, ವರದಿಗಾರರು ಜಿಲ್ಲೆಯನ್ನು ಬಿಟ್ಟುಕೊಟ್ಟು ಧಾರವಾಡ ಶಹರಕ್ಕೆ ಜಿಗಿದಂತೆ ಭಾಸವಾಗುತ್ತದೆ. ಎರಡನೆಯದಾಗಿ ಸಾಮಾನ್ಯ ಓದುಗನಿಗೆ ನಿಖರವಾದ ಹಾಗೂ ಸಂಕ್ಷಿಪ್ತವಾದ ಮಾಹಿತಿ ಬೇಕಾಗಿರುತ್ತದೆ. ಸಂತೆಯಲ್ಲಿ ಭೆಟ್ಟಿಯಾದ ಜನರು ತಮ್ಮತಮ್ಮಲ್ಲಿ ವಿನಿಮಯ ಮಾಡಿಕೊಳ್ಳುವಂತಹ ಜೊಳ್ಳು ಮಾತಿನಲ್ಲಿ ಅವನಿಗೆ ಆಸಕ್ತಿ ಇರುವದಿಲ್ಲ. ಮಳೆ ಒಮ್ಮಿಂದೊಮ್ಮೆಲೆ ಜೋರಾಯಿತೊ ಅಥವಾ ಕಾಲಕ್ರಮೇಣ ಜೋರಾಯಿತೊ ; ಮಳೆ ಬೀಳುವ ಸಂದರ್ಭದಲ್ಲಿ ಗಾಳಿ ಬೀಸುತ್ತಿತ್ತೊ ಇಲ್ಲವೊ ಎನ್ನುವ ಮಾಹಿತಿ ಓದುಗನಿಗೆ ಅನವಶ್ಯಕವಾಗಿದೆ. ಇಂತಿಷ್ಟು ಮಿಲಿಮೀಟರ ಮಳೆ ಆಗಿದೆ ಎಂದು ತಿಳಿಯುವದಷ್ಟೇ ಅವನಿಗೆ ಬೇಕಾಗಿರುತ್ತದೆ.

ಇದರ ಮುಂದಿನ ಪರಿಚ್ಛೇದದಲ್ಲಿ ಅಸ್ಪಷ್ಟತೆ ಇನ್ನೂ ಹೆಚ್ಚಾಗಿದೆ:
"ಸಂಜೆ 4ರ ಸಮಯದಲ್ಲಿ ಆಕಾಶದಲ್ಲಿ ಕಪ್ಪನೇ ಮೋಡಗಳು ಗೋಚರಿಸುತ್ತಿತ್ತು. ನಂತರ ಐದು ನಿಮಿಷಗಳ ಕಾಲ ಮಳೆ ನಿಂತಿತಾದರೂ ಮತ್ತೆ ಸುರಿಯಲು ಪ್ರಾರಂಬಿಸಿತು. ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಳ್ಳ ತುಂಬಿದ ವರದಿಗಳು ಬಂದಿವೆ. ನಗರದ ತಗ್ಗು ಪ್ರದೇಶಗಳಾದ ಬಾವಿಕಟ್ಟಿ ಪ್ಲಾಟ್, ಜನ್ನತ್ ನಗರ ಮತ್ತು ಲಕ್ಷ್ಮಿಸಿಂಗನ ಕೆರೆಯಲ್ಲಿ ನೀರು ತುಂಬಿವೆಯಾದರೂ ಅನಾಹುತಗಳು ಸಂಭವಿಸಿಲ್ಲ. ನಗರದ ಗಟಾರುಗಳು ತುಂಬಿದ್ದು ಜಿಲ್ಲೆಯಲ್ಲಿ ಎಲ್ಲ ಕಡೆಗಳಲ್ಲಿಯೂ ಮಳೆ ಬಿದ್ದ ವರದಿಯಾಗಿವೆ. ಹೊಲಗಳಲ್ಲಿ ನೀರು ಹರಿದಿವೆ. ಹಳ್ಳಗಳಲ್ಲಿ ನೀರು ಬಂದಿವೆಯಾದರೂ ಸಂಚಾರಕ್ಕೆ ಅಡ್ಡಿಯಾಗಿಲ್ಲ."
ವರದಿಯ ಪ್ರಕಾರ ಮೋಡ ಕವಿದ ವಾತಾವರಣ ಮುಂಜಾನೆಯಿಂದಲೇ ಇದೆ. ಮಳೆಯೂ ಸಹ ಬಿಟ್ಟೂಬಿಡದೇ ಬೀಳುತ್ತಿದೆ. ಅಂದ ಮೇಲೆ ಸಂಜೆ ನಾಲ್ಕರ ಸಮಯದಲ್ಲಿ ಆಕಾಶದಲ್ಲಿ ಕಪ್ಪನೆಯ ಮೋಡಗಳು ಗೋಚರಿಸುತ್ತಿದ್ದವು ಎಂದು ಹೇಳುವದರ ಔಚಿತ್ಯವೇನು? ಅಲ್ಲದೆ, "ಕಪ್ಪನೇ ಮೋಡಗಳು ಗೋಚರಿಸುತ್ತಿತ್ತು" ಎನ್ನುವದು ವ್ಯಾಕರಣದ ಕೊಲೆಯಲ್ಲವೆ?
"ಐದು ನಿಮಿಷಗಳ ನಂತರ ಮಳೆ ಸುರಿಯಲಾರಂಭಿಸಿತು" ಅಂದರೆ, ನಾಲ್ಕು ಹೊಡೆದು ಐದು ನಿಮಿಷಕ್ಕೆ ಮಳೆ ಪ್ರಾರಂಭವಾಯಿತೆ?
ಈ ಸಮಯವು ಇಡೀ ಧಾರವಾಡ ಜಿಲ್ಲೆಗೆ ಅನ್ವಯಿಸುವದೊ ಅಥವಾ ಧಾರವಾಡ ನಗರಕ್ಕೆ ಅನ್ವಯಿಸುವದೊ? ಧಾರವಾಡ ನಗರದಲ್ಲಿಯೇ ಒಂದೆಡೆ ಮಳೆ ಬೀಳುತ್ತಿದ್ದಾಗ, ಇನ್ನೊಂದೆಡೆ ಮಳೆ ಇರುವದಿಲ್ಲ. ಬಹುಶ: ಈ ಮಳೆ ವರದಿಗಾರರ ಮನೆಯ ಮೇಲೆ ಬೀಳುತ್ತಿತ್ತೇನೊ?!

ನಗರದಲ್ಲಿ ಬೀಳುತ್ತಿದ್ದ ಮಳೆಯ ವರದಿ ಒಮ್ಮೆಲೆ ಹಳ್ಳಿಗಳಿಗೆ ಜಿಗಿದು, ಅಲ್ಲಿ ಹಳ್ಳಗಳು ತುಂಬಿದ್ದನ್ನು ಅವಲೋಕಿಸಿ,       ಮತ್ತೆ ನಗರದಲ್ಲಿ ನೀರು ತುಂಬಿದ ಭಾಗಗಳ ವರ್ಣನೆಗೆ ಮರಳುತ್ತದೆ! ಇದರ ಮುಂದಿನ ಪರಿಚ್ಛೇದವಂತೂ ಕನ್ನಡ ಸಾಲೆಯ ಹುಡುಗನ ನಿಬಂಧ(--’ಒಂದು ಮಳೆಗಾಲದ ದಿನ’--)ದಂತೆ ಭಾಸವಾಗುತ್ತದೆ:
"ಇಂದು ಸಂಜೆ ಜನರು ಕೊಡೆ ಹಿಡಿದುಕೊಂಡೇ ಅಡ್ಡಾಡುವ ದೃಶ್ಯ ಸಾಮಾನ್ಯವಾಗಿತ್ತು. ನಗರದಲ್ಲಿ ವಾಹನಗಳು ಪಕ್ಕಕ್ಕೆ ಹಾಯ್ದು ಹೋದರೆ ಅಲ್ಲಿ ನೀರಿನ ಸ್ನಾನ ಮಾಡಿಸುವದಂತೂ ಸತ್ಯವಿತ್ತು."
ವರದಿಯ ಕೊನೆಯ ಸಾಲಿನಲ್ಲಿ ‘ರವಿ ಕರಲಿಂಗಣ್ಣವರ’ ಎಂದು ಬಿಡಿಸಿ ಬರೆಯದೆ, ‘ರವಿಕರಲಿಂಗಣ್ಣವರ’ ಎಂದು ಕೂಡಿಸಿ ಬರೆಯಲಾಗಿದೆ.

ಇದೇ ದಿನಾಂಕದ ಮತ್ತೊಂದು ಪುಟದಲ್ಲಿರುವ ವರದಿ ಹೀಗಿದೆ:
"ಬರಗಾಲ ಪೀಡಿತ ಎಂದು ಘೋಷಿಸಲಾಗಿದ್ದ ಶಿರಹಟ್ಟಿ ಮತ್ತು ಮುಂಡರಗಿ ತಾಲೂಕಿನಲ್ಲಿ ಅಂಕಿ ಅಂಶಗಳ ಪ್ರಕಾರ ಉತ್ತಮವಾಗಿ ಮಳೆ ಸುರಿಯುತ್ತಿದೆ."
"ಅಂಕಿ ಅಂಶಗಳ ಪ್ರಕಾರ ಮಳೆ ಸುರಿಯುತ್ತಿದೆ" ಎಂದು ಹೇಳಿದರೆ, ವಾಸ್ತವದಲ್ಲಿ ಹಾಗಿಲ್ಲ ಎನ್ನುವ ಅರ್ಥ ಹೊಮ್ಮುವದಿಲ್ಲವೆ? ಎರಡನೆಯದಾಗಿ  ಅಂಕಿ ಅಂಶಗಳು ಪತ್ರಿಕೆಯನ್ನು ತಲುಪಿದಾಗ ಮಳೆ ಸುರಿದು ಮುಗಿದಿರುತ್ತಿದೆ. ಆದುದರಿಂದ ‘ಮಳೆ ಸುರಿಯುತ್ತಿದೆ’ ಎಂದು ವರ್ತಮಾನಕಾಲದಲ್ಲಿ ಹೇಳಬಾರದು. ಮೂರನೆಯದಾಗಿ ಈ ಮಳೆ ಜನರಿಗೆ ಬೇಕಾಗಿರಲಿಲ್ಲ. ಆದುದರಿಂದ ‘ಉತ್ತಮವಾಗಿ’ ಎಂದು ವರ್ಣಿಸಬಾರದು ; ‘ಜೋರಾಗಿ’ ಎಂದು ಹೇಳಬಹುದಿತ್ತು.

ಅಕ್ಟೋಬರ ೮ನೆಯ ದಿನಾಂಕದ ೫ನೆಯ ಪುಟದಲ್ಲಿ, ರಸಾಯನ ಶಾಸ್ತ್ರದಲ್ಲಿ ನೋಬೆಲ್ ಪದಕವನ್ನು ಪಡೆದ ಶ್ರೀ ರಾಮಕೃಷ್ಣನ್ ವೆಂಕಟರಾಮನ್ ಅವರನ್ನು "ಅಮೆರಿಕ ಮೂಲದ ಭಾರತೀಯ ವಿಜ್ಞಾನಿ" ಎಂದು ಬರೆಯಲಾಗಿದೆ. ಈ ವ್ಯತ್ಯಸ್ತ ವರ್ಣನೆಯನ್ನು ರೋಚಕ ಪ್ರಮಾದವೆಂದು ಭಾವಿಸಿ ಸಮಾಧಾನಪಟ್ಟುಕೊಳ್ಳಬೇಕಷ್ಟೆ!

(೫) ಮಾಹಿತಿಯ ತಪ್ಪುಗಳು:
ಅಕ್ಟೋಬರ ೧೩ನೆಯ ದಿನಾಂಕದ ‘ಸಂಯುಕ್ತ ಕರ್ನಾಟಕ’ದ ‘ರಸಪ್ರಶ್ನೆ’ ವಿಭಾಗದಲ್ಲಿ ಕೇಳಲಾದ ಪ್ರಶ್ನೆ ಹಾಗೂ ಕೊಡಲಾದ ಉತ್ತರ ಹೀಗಿವೆ:
ಪ್ರಶ್ನೆ: ‘ಸಂಸ್ಕಾರ’ ಚಲನಚಿತ್ರದ ನಿರ್ದೇಶಕರು ಯಾರು?
ಕೊಟ್ಟ ಉತ್ತರ: ಗಿರೀಶ್ ಕಾರ್ನಾಡ್.
ಇದು ತಪ್ಪು ಉತ್ತರ. ‘ಸಂಸ್ಕಾರ’ ಚಲನಚಿತ್ರವನ್ನು ನಿರ್ದೇಶಿಸಿದವರು ಪಟ್ಟಾಭಿ ರೆಡ್ಡಿಯವರು. ಅವರ ಹೆಂಡತಿ ಸ್ನೇಹಲತಾ ರೆಡ್ಡಿಯವರು ಈ ಚಿತ್ರದ ಮುಖ್ಯ ಸ್ತ್ರೀ ಪಾತ್ರದಲ್ಲಿ ಹಾಗು ಗಿರೀಶ ಕಾರ್ನಾಡರು ಮುಖ್ಯ ಪುರುಷಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶನದಲ್ಲಿ ಕಾರ್ನಾಡರ ಪಾಲು ಇದ್ದಿರಬಹುದು. ಆದರೆ ಚಿತ್ರದ ಶೀರ್ಷಿಕೆಗಳ ಪ್ರಕಾರ ಪಟ್ಟಾಭಿಯವರೇ ನಿರ್ದೇಶಕರು.

ಎಪ್ಪತ್ತಾರು ವರ್ಷಗಳ ಇತಿಹಾಸವಿರುವ ‘ಸಂಯುಕ್ತ ಕರ್ನಾಟಕ’ ಯಾಕೆ ಈ ರೀತಿ ಎಡವುತ್ತ ನಡೆಯುತ್ತಿದೆ?

RSS

ಮಹಾತ್ಮಾ ಗಾಂಧಿ ಮತ್ತು ಮಾ ಬ್ಲಾ ಪೆನ್ನು

"ನನ್ನ ಜೀವನವೇ ನನ್ನ ಸಂದೇಶ" ಎಂದು ಮಹಾತ್ಮಾ ಗಾಂಧಿ ಹೇಳಿದ್ದು ಯಾವಗ ಅನ್ನುವುದನ್ನು ನಾವೆಲ್ಲರೂ ಮರೆತಿದ್ದರೂ ಅದನ್ನು ಆಗಾಗ ಪ್ರಯೋಗಿಸುವುದನ್ನು ಮಾತ್ರ ಮರೆಯುವುದಿಲ್ಲ. ಆದರೆ ಮಹಾತ್ಮ ಕೊಟ್ಟ ಸಂದೇಶವೇನು ಅದನ್ನು ನಾವು ಅರ್ಥೈಸುವುದು ಹೇಗೆ ಅನ್ನುವುದು ಮಾತ್ರ ಗಹನ ಚರ್ಚೆಯ ವಿಷಯವಾಗಬಹುದು. ಮಾಹಾತ್ಮ ಗಾಂಧಿಯನ್ನು ಓದಿಕೊಂಡಿದ್ದರೂ ಆತನ ಬಗ್ಗೆ ಪಾಂಡಿತ್ಯವಿಲ್ಲದ, ಯಾವ ಗಾಂಧೀವಾದದ ವಿಚರವನ್ನೂ ಪಾಲಿಸದ ನಾನು ಈ ವಿಷಯದಲ್ಲಿ ಹಠಾತ್ ಆಸಕ್ತಿ ಪಡೆಯುವುದಕ್ಕೆ ಕಾರಣವಿದೆ. ಈಚೆಗೆ ಪತ್ರಿಕೆಗಳಲ್ಲಿ ಮತ್ತು ನಗರದ ಹಲವೆಡೆ ಪೋಸ್ಟರುಗಳಲ್ಲಿ ಕಂಡ ಮಾ ಬ್ಲಾ [Mont Blanc] ಪೆನ್ನಿನ ಜಾಹೀರಾತನ್ನು ಕಂಡಾಗ ಈ ಪ್ರಶ್ನೆ ಸಹಜವಾಗಿ ನನ್ನಲ್ಲಿ ಉದ್ಭವವಾಯಿತು.





ಕನಸುಗಾರ ಯೂನಸ್ ಮತ್ತು ಲಾಭವಿಲ್ಲದ ವ್ಯಾಪಾರ

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ತಮ್ಮ ಗ್ರಾಮೀಣ್ ಬ್ಯಾಂಕಿನ ಚಿಕ್ಕ ಸಾಲದ ಕಾರ್ಯಕ್ರಮದ ಮೂಲಕ ಖ್ಯಾತಿಯನ್ನು ಪಡೆದವರು. ಬಾಂಗ್ಲಾದೇಶದಂತಹ ಪುಟ್ಟ ದೇಶದಲ್ಲಿ ಬಡವರಿಗೆ ಅದರಲ್ಲೂ ಮುಖ್ಯವಾಗಿ ಹೆಂಗಸರಿಗೆ ವಿತ್ತೀಯ ಸೇವೆಗಳನ್ನೊದಗಿಸಿದ್ದೇ ಅಲ್ಲದೇ ಬ್ಯಾಂಕಿಂಗ್ ನಡೆಸಬಹುದಾದ ರೀತಿಯನ್ನೇ ಮೂಲಭೂತವಾಗಿ ಪ್ರಶ್ನಿಸಿ ಅದಕ್ಕೆ ಒಂದು ವಿಭಿನ್ನ ರೂಪವನ್ನು ಕೊಟ್ಟವರು.




ಭೂಗತ ಜಗತ್ತಿನ ಒಳನೋಟಗಳು

ಸುಧೀರ್ ವೆಂಕಟೇಶ್ ಅವರ ಗ್ಯಾಂಗ್ ಲೀಡರ್ ಫರ್ ಎ ಡೇ ಒಂದು ಕುತೂಹಲಕಾರಿ ಪುಸ್ತಕ. ನಿಜಕ್ಕೂ ಈ ಪುಸ್ತಕ ಗಂಭೀರ ಬರವಣಿಗೆ ಮತ್ತು ಜನಪ್ರಿಯ ಬರವಣಿಗೆಯ ಮಧ್ಯೆ ತೂರಾಡುತ್ತಾ, ಕಡೆಗೆ ಅನೇಕ ಪ್ರಶ್ನೆಗಳನ್ನು ಎಬ್ಬಿಸಿ ಅವುಗಳನ್ನು ಉತ್ತರಿಸಲು ಪ್ರಯತ್ನಿಸದೆಯೇ ನಿಂತುಬಿಡುತ್ತದೆ. ಹೀಗೆ ಎಲ್ಲಕ್ಕೂ ಉತ್ತರವನ್ನು ನೀಡುವುದು ಸುಧೀರ್ ಅವರ ಉದ್ದೇಶವೂ ಅಲ್ಲ, ಅದು ಸಾಧ್ಯವೂ ಆಗುವುದಿಲ್ಲ ಎನ್ನುವ ಭಾವನೆ ನಮಗೆ ಬರುವುದರಲ್ಲಿ ಯಾವ ಸೋಜಿಗವೂ ಇಲ್ಲ. ಆದರೂ ಈ ಪುಸ್ತಕವನ್ನು ನಾವು ಓದಿ ಚರ್ಚಿಸಬೇಕಾದ ಅವಶ್ಯಕತೆಯಿದೆ.





ತಿರುಮಲೇಶರ ಕಾವ್ಯ

ಕನ್ನಡದಲ್ಲಿ ಕಾವ್ಯದಲ್ಲಿ ನನಗೆ ಪ್ರಿಯರಾದ ಕವಿ ತಿರುಮಲೇಶ. ಅದಕ್ಕೆ ಕಾರಣವಿಷ್ಟೇ - ತಿರುಮಲೇಶ ಯಾವಾಗಲೂ ಏನಾದರೂ ಹೊಸತನ್ನು ಹೇಳುತ್ತಾರೆ, ಹೊಸರೀತಿಯಲ್ಲಿ ಹೇಳುತ್ತಾರೆ. ’ಮುಖವಾಡಗಳು’ ಸಂಕಲನದಿಂದ ’ಅವಧ’ದ ವರೆಗೆ ಬಂದಿರುವ ಅವರ ಐದು ಕವನ ಸಂಗ್ರಹಗಳಲ್ಲಿ ವಿಶೇಷ ವೈವಿಧ್ಯತೆಯಿದೆ. ಅಡಿಗರ ಜಾಡಿನಲ್ಲಿಯೇ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದ ತಿರುಮಲೇಶರು ನಂತರ ತಮ್ಮದೇ ಪ್ರತ್ಯೇಕತೆಯನ್ನು ಶೋಧಿಸುತ್ತಾ ತಮ್ಮದೇ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿದರು.




ರುದ್ರಮಾತಾದ ರಾಮಜೀಭಾಯಿ

ನಾನು ಕೆಲಸ ಮಾಡುವ ಸಂಸ್ಥೆಯಲ್ಲಿ ಯಾವಾಗಲೂ ಕೇಳಿಬರುವ ಮಾತುಗಳು ವ್ಯಾಪಾರ, ವ್ಯಾಪಾರದ ಬೆಳವಣಿಗೆ, ಲಾಭಾಂಶ, ಗುರಿ-ಸಾಧನೆಗಳಿಗೆ ಸಂಬಂಧಿಸಿದ್ದು. ನಮ್ಮ ವಿದ್ಯಾರ್ಥಿಗಳೂ ಸಹ ಕಾರ್ಯಕ್ಷೇತ್ರದ ಧ್ಯೇಯ, ಅದನ್ನು ಆರ್ಜಿಸಲು ನಡೆಸಬೇಕಾದ ತಯಾರಿ, ಹಾಗೂ ಯಶಸ್ವೀ ವ್ಯಪಾರವನ್ನು ಸಮರ್ಥವಾಗಿ ನಡೆಸುವ ಮಾತನ್ನು ಆಡುತ್ತಿರುತ್ತಾರೆ. ಹೀಗಾಗಿ ಯಾವುದೇ ವಿಚಾರವನ್ನೋ-ವ್ಯಾಪಾರವನ್ನೋ ಪರಿಗಣಿಸುವಾಗ ಅದರ ಭವಿಷ್ಯವೇನು ಆ ವ್ಯಾಪಾರದಿಂದ ಬರುವ ಲಾಭಾಂಶವೇನು - ಹಾಗೂ ಅದನ್ನು ಸಾಧಿಸಲು ಹಾಕಿಕೊಳ್ಳಬೇಕಾದ ಯೋಜನೆಗಳೇನು ಎನ್ನುವ ವಿಚಾರಗಳನ್ನು ಮಥಿಸುತ್ತಲೇ ಇರುತ್ತೇವೆ. ಹೆಚ್ಚು ಕೆಲಸಕ್ಕೆ ಹೆಚ್ಚು ಹಣ - ಸಮರ್ಥ ಕೆಲಸಕ್ಕೆ ಕೊಡಬೇಕಾದ ಪ್ರೋತ್ಸಾಹ ಹೀಗೆಲ್ಲಾ ಮ್ಯಾನೇಜ್ಮೆಂಟಿನ ಥಿಯರಿಗಳನ್ನು ಒಗೆಯುತ್ತಿರುವ ವ್ಯಾಪಾರದ ಮಕ್ಕಾದಿಂದ ರುದ್ರಮಾತಾ ಅನ್ನುವ ಪುಟ್ಟ ಹೋಬಳಿಗೆ ಹೋದರೆ ಕಾಣಬಹುದಾದ ಸತ್ಯವೇ ಬೇರೆ ರೀತಿಯದ್ದು!




Members

  • Arun S Naik
  • rudreshguru
  • sureshpadesur
  • D Janardhan
  • Reshma Raj
  • R.DhanaKumaraSwamy
  • Mahesh
  • SURESH BHAT
  • Purushotham H K
  • usha
  • Surendra Mogaveera
  • Prasanna
  • Manu
  • suresh krishna
  • shekar
  • purshottamnayak
  • asha s
  • JyothiGowda.HN
  • akshay shetty
  • Bhaskar
 

Photos

Loading…

Blog Posts

Ismail Mk Shivamogga

"ನಗರ ಕೋಟೆ" ಜೀವನದಲ್ಲಿ ಒಮ್ಮೆಯಾದರು ನೋಡಿರಿ




ಅಂದು ನಾನು ಡಿಗ್ರಿಯಲ್ಲಿದ್ದಾಗ ಬೇಕಲ ಕೋಟೆ ನೋಡಲು ಹೋಗಿದ್ದೆ, ಆಗ ಅಲ್ಲಿ ಯಾವುದೇ ವ್ಯವಸ್ಥೆ ಇರಲಿಲ್ಲ ಅದೊಂದು ನಿರ್… Continue

Posted by Ismail Mk Shivamogga on November 7, 2009 at 12:33pm

deepika

ನನ್ನ ಜೀವದ ಜೀವವಾಗಿ ಇರುವ ಜೀವ ನೀನು..............

left;">


ನನ್ನ ಜೀವದ ಜೀವವಾಗಿ ಇರುವ ಜೀವ ನೀನು !
ಇದ್ದೆ ನಾ ನನ್ನ ಪಾಡಿಗೆ ಏನು ಅರಿವಿರಲಿಲ್ಲ ನಿನ್ನ ಕಾಣುವವರೆಗೂ !
ಮನ ಹುಚ್ಚು ಪ್ರೀತಿಗೆ ಸೋತಿರಲಿಲ್ಲ !ನಿನ್ನ ಪ್ರೀತಿಯಲ್ಲಿ ಬೀಳುವವರೆಗೂ!
ಏನಾಗುತ್ತಿದೆ ಅರಿವಾಗುತಿಲ್ಲ ಮನದ ಒಳಗೂ ಹೊರಗೂ!
ನೂರಾರು ಕನಸಿನ ಕಾಮನ ಬಿಲ್ಲ ಮನಸಿಗೆ ನೀಡಿದವನು !
ಮನಸು ಬಿಚ್ಚಿ ನಾ ನುಡಿವೆ ನನ್ನ ಭಾವನೆ ನೂರು!
ನನ್ನ ಹೃದಯದ ಏರಿಳಿತದ ಬಡಿತ ನೀನು !
ನೀನಲ್ಲವೇ ಗೆಳೆಯ ನನ್ನ ಬದುಕಿನ… Continue

Posted by deepika on November 5, 2009 at 12:30am — 2 Comments

KARNATAKA KANNADA

GANI DANI GALA DIBBANADALLI, BHARATHA MAATHEYU MAAYA AAGUTTALE.... navu.. neevu... maaya

GANI DANI GALA DIBBANADALLI, BHARATHA MAATHEYU MAAYA AAGUTTALE.
ella maaya... ella maaya... naale neevu maaya... naale naavu maaya

KANNADIGAS LISTEN TO THIS SONG
Ella maaya ella maaya - Mathad mathadu mallige
http://www.youtube.com/watch?v=1drhKbZssx8

ella maaya... ELLA MAAAYA...
GANI DANI galannu nambidare,
navella maaya..
gani dani gala nambidare....naale naavu maaya..
GANI DANI GALA NAMBIDARE....naale neevu maaya..
ELLA MAAYA..… Continue

Posted by KARNATAKA KANNADA on November 3, 2009 at 8:00pm

Dr.B.R.Satyanarayana

ಡಾ.ರಾಜ್ ಗೇ ಗುದ್ದು!

ಆಗ
ಕನ್ನಡದ ಕಣ್ಮಣಿ ರಸಿಕರರಾಜ

ನಟಸಾರ್ವಭೌಮ ಪದ್ಮಭೂಷಣ

ಡಾ.ರಾಜಕುಮಾರ್

ನಾಯಕರಾಗಿ

ನೂರಾರು ಖಳನಾಯಕರ

ಮೂತಿಗೇ ಗುದ್ದಿದ್ದರು.



ಈಗ

ಪೋಸ್ಟಾಫೀಸಿನವರು

ನಿತ್ಯವೂ ಗುದ್ದುತ್ತಿದ್ದಾರೆ

ರಾಜ್ ಮುಖದ (ಸ್ಟ್ಯಾಂಪಿನ) ಮೇಲೆ!

Posted by Dr.B.R.Satyanarayana on November 2, 2009 at 10:08pm

Mahantesh.V.Angadi

ಸಕಲ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಕನ್ನಡಪೂರ್ವಕ ಶುಭಾಶಯಗಳು ....

ಪ್ರಪಂಚದಾದ್ಯಂತ ನೆಲೆಸಿರುವ ಸರ್ವ ಕನ್ನಡಿಗರೇ,
ನಮ್ಮ ನಾಲಗೆಯನ್ನು ಸೀಳಿಸಿ, ಬಾಯಿಯನ್ನು ಹೊಲಿಸಿದರೂ: ಮೂಗಿನಿಂದಾದರೂ "ಕನ್ನಡ" ಪದವನ್ನು ಆಡುತ್ತೇವೆ ಎಂಬ ಆತ್ಮವಿಶ್ವಾಸ ಪ್ರತಿಯೋರ್ವ ಕನ್ನಡಿಗನದಾಗಲಿ ಎಂದು ಆಶಿಸುವ

ಕರ್ನಾಟಕ ಸುಂದರ ನದಿವನಗಳ ನಾಡು,ಕಲೆ ಸಂಸ್ಕೃತಿಗಳ ಬೀಡು , ಕವಿಗಳು,ವಚನಕಾರರ ದಾಸಶ್ರ್ಯೇಷ್ಟರ ನೆಲೆವೀಡು , ವೀರವನಿತೆಯರ ಪುಣ್ಯಭೂಮಿ ,ಮಾಹಿತಿ ತಂತ್ರಜ್ಞರ ತವರೂರು. ಕನ್ನಡಕ್ಕಾಗಿ ಕೈ ಎತ್ತೋಣ, ಕನ್ನಡ ದೀಪವನ್ನು ಹಚ್ಚೋಣ ,ಕನ್ನಡ ನಮ್ಮ ಉಸಿರಾಗಿಸಿಕೊಳ್ಳೋಣ ,ಕನ್ನಡ ಭಾಷೆಯನ್ನು ,ಕರ್ನಾಟಕವನ್ನು ಉಳಿಸೋಣ ,ಬೆಳೆಸೋಣ ಇಂಥಹ ಭವ್ಯ ಪರಂಪರೆಯ, ಹಿನ್ನಲೆಯ ಭದ್ರ ಬುನಾದಿಯ ಮೇಲೆ ಸಮೃದ್ಧ ಕರ್ನಾಟಕವನ್ನು… Continue

Posted by Mahantesh.V.Angadi on November 1, 2009 at 7:18pm — 1 Comment

Mandya Jagadish

vayassu

Posted by Mandya Jagadish on October 31, 2009 at 11:31pm

Mandya Jagadish

bhagnapremi

Posted by Mandya Jagadish on October 31, 2009 at 11:30pm

Mandya Jagadish

taayi

Posted by Mandya Jagadish on October 31, 2009 at 10:36pm — 1 Comment

Dr. Azad

ರಾಜ್ಯೋತ್ಸವ ಶುಭಾಷಯಗಳು


ಕನ್ನಡ ನಾಡು-ನುಡಿ ಬಾಂಧವರಿಗೆ ಶುಭಾಷಯಗಳು

Posted by Dr. Azad on October 31, 2009 at 11:44am — 1 Comment

RSS

ಎಲ್ಲ ಮರೆತಿರುವಾಗ....

ಹೊರಗೆ ಮುಸಲಧಾರೆಯ ಆರ್ಭಟಕ್ಕೆ ಸುಯ್ಯೆಂದು ಬೀಸುವ ಗಾಳಿ ಸಾಥ್ ನೀಡುತ್ತಿದ್ದರೆ, ಒಳಗೆ ಬೆಚ್ಚಗೆ ಸ್ವೆಟರ್ ಹಾಕಿಕೊಂಡು ಒಂದು ಕೈಯಲ್ಲಿ ಬಿಸಿ ಕಾಫಿಯನ್ನೂ ಇನ್ನೊಂದು ಕೈಯಲ್ಲಿ ಕಾರಂತರ "ಮೂಕಜ್ಜಿಯ ಕನಸುಗಳನ್ನೂ" ಹಿಡಿದುಕೊಂಡು ಕುಳಿತಿದ್ದಳು ಪಾವನಿ. ಹಾಗಂತ ಇದೇ ಮೊದಲೇನಲ್ಲ ಆಕೆ ಈ ಕಾದಂಬರಿಯನ್ನು ಓದುತ್ತಿರುವುದು. ಕಳೆದ ನಾಲ್ಕೈದು ವರ್ಷಗಳಲ್ಲಿ ಮೂರು ಸಲ ಓದಿ ಮುಗಿಸಿದ್ದಾಗಿದೆ. ಇದು ನಾಲ್ಕನೆಯ ಬಾರಿ ಅಷ್ಟೇ. ಅದೇನೋ ಎಂತೋ ಮೂಕಜ್ಜಿಯ ಕನವರಿಕೆಗಳು, ವಿಚಿತ್ರ ಕನಸುಗಳು ಹಾಗೂ ಆಕೆಯೊಳಗಿನ ವಿಶೇಷತೆಯಾದ ವಸ್ತು ಸ್ಪರ್ಶ ಮಾತ್ರದಿಂದ ಜನರನ್ನೇ ಅಳೆಯುವ ಪರಿ, ಎಲ್ಲವೂ ಪ್ರತಿ ಸಲ ಓದುವಾಗಲೂ ಅವಳಲ್ಲೊಂದು ವಿನೂತನ ಭಾವವನ್ನು ಭಿತ್ತುತ್ತಿದ್ದವು. ಇವೆಲ್ಲವುಗಳ ಜೊತೆಗೇ ಸದಾ ಆಕೆಯನ್ನು ಕಾಡುತ್ತಿದ್ದುದು ತನ್ನ ಮೂರೂರಜ್ಜಿಯ ನೆನಪುಗಳು. ಎಲ್ಲೋ ಒಂದು ಮೂಲೆಯಲ್ಲಿ ಪಾವನಿ ಮೂರೂರಜ್ಜಿಯನ್ನು ಮೂಕಜ್ಜಿಯೊಂದಿಗೆ ಹೋಲಿಸಿಕೊಂಡು ನೋಡುತ್ತಿದ್ದಳು. ಕ್ರಮೇಣ ಅವಳ ಮನಃಪಟಲದಲ್ಲಿ ಮೂಕಜ್ಜಿಯೇ ಮೂರೂರಜ್ಜಿಯಾಗಿ ಮಾರ್ಪಾಡಾಗುತ್ತಿದ್ದಳು. ಇದಕ್ಕೆ ಮೂಲ ಕಾರಣ ಇಬ್ಬರ ಹೆಸರೂ ಮೂಕಾಂಬಿಕೆಯಾಗಿದ್ದುದೂ ಹೌದು.

ಪಾವನಿಯ ಅಜ್ಜ ಅಂದರೆ ತಾಯಿಯ ತಂದೆಯ ಏಕಮಾತ್ರ ತಂಗಿಯೇ ಈ ಮೂರೂರಜ್ಜಿ. ಅಣ್ಣ ತಂಗಿಯರ ಅನುಬಂಧ, ವಾತ್ಸಲ್ಯವನ್ನು ಸ್ವತಃ ತನ್ನಜ್ಜಿ ಅಂದರೆ ತಾಯಿಯ ತಾಯಿಯ ಮೂಲಕವೇ ಅನೇಕ ಬಾರಿ ಕೇಳಿದ್ದಳು. "ಆಯಿ ನಿಜ ಹೇಳು ನೀನೂ ಮೂರೂರಜ್ಜಿ ಯಾವತ್ತೂ ಠೂ ಬಿಟ್ಟಿದ್ದಿಲ್ಯ? ಜಗ್ಳ ಆಡಿದ್ದಿಲ್ಯ? ಆವಾಗ ಅಜ್ಜ ಯಾರ ಪಕ್ಷ ವಹಿಸ್ತಿದ್ದ? ನಿಂದೋ ತನ್ನ ತಂಗಿದೋ?" ಎಂದು ಪಾವನಿ ಕೆಣಕಲು ಸರಸಮ್ಮ ತನ್ನ ಬೊಚ್ಚು ಬಾಯಿ ತೆಗೆದು ಗೊಳ್ಳೆಂದು ನಕ್ಕಿದ್ದರು. "ಎಂತ ಕೂಸೇ ನಂಗವೆಂತ ನಿಂಗ್ಳ ಈಗಿನ ಆ ಸುಡುಗಾಡು ಧಾರಾಹಿ ತರಹ ಹೇಳಿ ಮಾಡ್ಕಂಜ್ಯ? ಅದು ನನ್ನ ನಾದ್ನಿಗಿಂತ ಹೆಚ್ಚಾಗಿದ್ದು ತಿಳ್ಕ. ಅದೂ ಅಲ್ದೇ ಪಾಪ ಅದ್ರ ಜೀವ್ನವೇ ಒಂದು ಗೋಳಾಟ ಆಗಿರಕಿರೆ ನಾ ಎಂತಕ್ಕೆ ಸುಮ್ನೆ ಜಗ್ಳ ಆಡ್ಲಿ ಹೇಳು? ಆ ಬಡ್ವೆಯಾದ್ರೂ ಎಂತಕ್ಕೇ ಹೇಳಿ ನನ್ನ ಜೊತೆಗೆ ಮಾತಿಗೆ ನಿಲ್ಗು? ಹಾಂಗೆ ನೋಡಿದ್ರೆ ಮೂಕಾಂಬೆ ಹುಟ್ಟಿ, ಬದ್ಕಿದ್ದೇ ಒಂದು ಪವಾಡ.. ಆದ್ರೆ ಅದು ಜೀವನ್ದಲ್ಲಿ ಕಂಡ ದುಃಖ, ಸಂಕ್ಟ ಎಣ್ಸಿದ್ರೆ ಒಂದೊದ್ಸಲ ಅದು ಬದ್ಕಿದ್ದಾದ್ರೂ ಎಂತಕ್ಕನೋ ಕಂಡಿತ್ತು ನನ್ಗೆ ನೋಡು..." ಎಂದು ಹೇಳುತ್ತಾ ಆಕೆಯ ಕಣ್ಣಂಚಿನಲ್ಲಿಣುಕಿದ ವ್ಯಥೆಯ ಬಿಸಿ ಪಾವನಿಯನ್ನೂ ತಾಗಿದಂತಾಗಿತ್ತು.

"ಕೂಸೆ ಮೂಕಾಂಬೆ ಹುಟ್ಟಿದಾಗ ಮಾವ್ನೋರಿಗೆ ರಾಶಿ ಖುಶಿ ಆಗಿತ್ತಡ.. ಹೆರಿಗೆ ರಾಶಿ ಕಷ್ಟ ಆಗಿ ಅತ್ತೇರು ಬದ್ಕಿದ್ದೇ ದೊಡ್ಡದು.... ಹುಟ್ಟು ಒಂದು ದಿವ್ಸ ಕೂಸು ಕುಂಯ್ಯಿ..ಕುಂಯ್ಯಿ.. ಅಂದಿದ್ದು, ಮಾರನೇ ದಿವ್ಸ ಸದ್ದೇ ಇಲ್ಯಡ ನೋಡು. ಆಗೋತು... ಕಥೆ ಮೂಗ್ದೇ ಹೋತು... ಋಣ ಇಷ್ಟೇ ಇದ್ದಿತ್ತು ಇದ್ರಿದ್ದು.. ಹೇಳಿ ಅಂದ್ಕಂಡು ಮಾವ್ನೋರು ನಿನ್ನಜ್ಜ ಎಲ್ಲಾ ಸೇರಿ ಕಣ್ಣೀರ‍ಿಡ್ತಾ ಗುಂಡಿ ತೋಡಿ ಅದ್ನ ಹಾಕಿದ್ದೇ ತಡ ನೋಡು.. ಮತ್ತೆ ಸಣ್ಣಕೆ ಕುಂಯ್ಯಿ ಅಂತಡ. ಇವ್ಕೆ ಒಂದ್ಸಲ ಕೈಕಾಲೇ ಆಡಿದ್ದಿಲ್ಯಡ. ಒಂದು ಚೂರು ಆಚೀಚೆ ಆಗಿದ್ರೆ ಎಂತಾ ಅನಾಹುತ ಆಗ್ತಿತ್ತು ಹೇಳು? ಅದ್ರ ಪ್ರಾಣಾನ ಆ ಯಮರಾಜ ಹಿಂದೇನೆ ಕಳ್ಸುವುಟ ನೋಡು.. ಇಲ್ಲೇ ಅನುಭವಿಸ್ಲಿ ಹೇಳಾದಿಕ್ಕು.. ಹ್ಮಂ.. ಎಲ್ಲಾ ಬ್ರಹ್ಮರಾಯನ ಹಣೆಬರಹ.. ಪಾಪ.. ಸತ್ತೇಹೋತು ಹೇಳಿ ಅಂದ್ಕಂಡಿದ್ದು ಬದಿಕಂಡು ಇವತ್ತಿನವರೆಗೂ ಸಾಯ್ತಾನೇ ಇದ್ದು.." ಎಂದು ಸೆರಗಂಚಿನಿಂದ ಕಣ್ಣೊರೆಸಿಕೊಂಡಿದ್ದಳು ಸರಸಮ್ಮ.

ಆಯಿ ಹೇಳಿದ್ದ ಈ ಕಥೆಯನ್ನು ತನ್ನ ತಾಯಿಯ ಬಾಯಿಯಲ್ಲಿ ಅದೆಷ್ಟೋ ಬಾರಿ ಕೇಳಿ ವಿಸ್ಮಿತಳಾಗಿದ್ದಳು ಪಾವನಿ. ಇನ್ನೇನು ಮಣ್ಣಾಗ ಬೇಕಿದ್ದ ಕೂಸು ಉಸಿರಾಡಿ ಬಾಳಿ ಬದುಕಿದ್ದು ಒಂದು ಅಪೂರ್ವ ಸಂಗತಿ ಎನಿಸಿತ್ತು ಅವಳಿಗೆ. ಪಾವನಿಯ ತಾಯಿ ತನ್ನ ಬಾಲ್ಯವನ್ನೆಲ್ಲಾ ಕಳೆದದ್ದು ಸೋದರತ್ತೆಯ ಮನೆಯಾದ ಮೂರೂರಿನಲ್ಲೇ ಆಗಿತ್ತು. ಹಾಗಾಗಿ ಇನ್ನೂ ಆಕೆಗೆ ಅವಳ ಕಂಡರೆ ವಿಶೇಷ ಮಮತೆ. ಹೆತ್ತ ಮಕ್ಕಳು ಬರಲು ಹಿಂದೆ ಮುಂದೆ ನೋಡಿದರೂ ಅವಳು ಮಾತ್ರ ವರುಷಕ್ಕೆರಡು ಬಾರಿಯಾದರೂ ಪಾವನಿಯ ಕರೆದುಕೊಂಡು ಸೋದರತ್ತೆಯನ್ನು ಕಂಡು ಬರುತ್ತಿದ್ದಳು. ಆದರೂ ಪಾವನಿಗೆ ಕೆಲವೊಂದು ವಿಷಯಗಳ ಸ್ಪಷ್ಟತೆ ಈವರೆಗೂ ಆಗಿರಲಿಲ್ಲ. ಯಾಕೆ ತನ್ನಜ್ಜ, ಮೂರೂರಜ್ಜಿಯನ್ನು ಮುಖ ನೋಡಿ ಮಾತಾಡಿಸೊಲ್ಲ?.. ಯಾಕೆ ಮೂರೂರಜ್ಜಿ ತನ್ನ ಅಣ್ಣಯ್ಯನೆದುರು ಬರಲು ಆದಷ್ಟು ಹಿಂದೇಟು ಹಾಕುತ್ತಾಳೆ? ಅಂಥದ್ದೇನು ನಡೆದಿರಬಹುದು ಎಂದು ಎಷ್ಟೋ ಸಲ ಅಮ್ಮನನ್ನೂ ಕೇಳಿದ್ದಳು. ಆದರೆ ಅಷ್ಟೊಂದು ಸಮರ್ಪಕ ಉತ್ತರವೇನೂ ಆಕೆಗೆ ಸಿಕ್ಕಿರಲಿಲ್ಲ. ತನ್ನತ್ತೆಯ ಗೋಳಿನ ಕಥೆಯನ್ನು ಮತ್ತೆ ಹೇಳಲಿಚ್ಚಿಸದೆಯೋ ಇಲ್ಲಾ ಹಿಂದೆ ನಡೆದ ಕಹಿ ನೆನಪುಗಳನ್ನು ಮತ್ತೆ ಹಸಿರಾಗಿಸಲು ಇಷ್ಟವಾಗದೆಯೋ ಹಾರಿಕೆಯ ಉತ್ತರವನ್ನಷ್ಟೇ ನೀಡಿದ್ದಳು. ಆದರೆ ತನ್ನ ಸಂಶಯಗಳಿಗೆಲ್ಲಾ ಸರಿಯಾದ ಉತ್ತರಗಳನ್ನು ಪಾವನಿ ಮುಂದೊಂದು ದಿನ ತನ್ನ ಆಯಿಯ ಬಳಿಯೇ ಕೇಳಿದಳು. ಸರಸಮ್ಮನ ಸ್ಮೃತಿಪಟಲದಲ್ಲಿ ಆ ಕಹಿ ಘಟನೆ ಎಂದೂ ಮರೆಯಲಾಗದ ಛವಿಯನ್ನೊತ್ತಿತ್ತು. ಹೇಗೆ ತಾನೇ ಆಕೆ ಮರೆತಾರು ತನ್ನ ಪ್ರಿಯ ನಾದಿನಿಯ ಆ ಕರುಣಾಜನಕ ಸ್ಥಿತಿಯನ್ನು.

ಮೂಕಾಂಬಿಕೆ ಹುಟ್ಟಿ ಮರುಜನ್ಮ ಪಡೆದದ್ದೇ ಒಂದು ಪವಾಡವಷ್ಟೇ. ಆದರೆ ಆಕೆಯ ಬದುಕಿನಲ್ಲೇನೂ ಪವಾಡ ನಡೆಯಲೇ ಇಲ್ಲಾ. ಇಲ್ಲೇ ಸ್ವರ್ಗ..ಇಲ್ಲೇ ನರಕ ಎಂಬತೆ ಜೀವ ಪಡೆದದ್ದೇ ಸ್ವರ್ಗ ಉಳಿದದ್ದೆಲ್ಲಾ ನರಕ ಎಂಬಂತಾಗಿತ್ತು ಆಕೆಯ ಬದುಕು ಮುಂದೆ. ನರಸಿಂಹ ಜೋಯಿಸರು ಸರಸಮ್ಮನ ವರಿಸಿ ಗುಬ್ಬಿಮನೆಗೆ ತಂದ ವರುಷದೊಳಗೇ ಮೂಕಾಂಬಿಕೆಯನ್ನೂ ಕನ್ಯಾದಾನ ಮಾಡಿ ಕಳುಹಿಸಿದ್ದರು. ಏಕ ಮಾತ್ರ ತಂಗಿಯ ಮದುವೆಯನ್ನು ಗೊತ್ತುಮಾಡುವ ಮೊದಲು ಯೋಗ್ಯ ವರನಿಗಾಗಿ ಜೋಯಿಸರು ಚೆನ್ನಾಗಿಯೇ ಹುಡುಕಿದ್ದರು. ಅಂತೂ ಕೊನೆಗೆ ಸಿಕ್ಕಿದ್ದು ಕುಮಟಾದಿಂದ ೬-೭ ಕಿ.ಮೀ ದೂರದ ಮೂರೂರಿನ ಶ್ರೀಪತಿ ಹೆಗಡೆ. "ಜೋಯ್ಸ್‌ರೇ ಚಿನ್ನದ ತುಂಡು ಮಾಣಿ.. ಕಣ್ಮುಚ್ಕ ಮದ್ವೆ ಮಾಡ್ಲಕ್ಕು.. ದೊಡ್ಡ ಮಾತೇ ಆಡ್ತ್ನಿಲ್ಲೆ ನೋಡಿ.. ನಿಮ್ಮ ಕೂಸು ಆರಾಮಾಗಿರ್ತು" ಎಂದು ಮೂರೂರು, ಕಲ್ಲಬ್ಬೆಯ ಆಚೀಚೆ ಮನೆಯವರು ಹೇಳಿದ್ದು ಕೇಳಿಯೇ ಜೋಯಿಸರು ಧಾರೆ ಎರೆದು ಕೊಟ್ಟಿದ್ದರು. ಹದಿನಾರರಲ್ಲಿಯೇ ಹಸೆಮಣೆ ಏರಿ ಹೊಸಬದುಕ ಕನಸ ಹೊತ್ತು ಗುಬ್ಬಿಮನೆಯಿಂದ ಮೂರೂರು ಸೇರಿದ ಮೂಕಾಂಬೆಯ ಬಾಳು ಮೂರಾಬಟ್ಟೆ ಆಗಲು ಹೆಚ್ಚು ಸಮಯವೇನೂ ಬೇಕಾಗಲಿಲ್ಲ.

ಊರವರ ಮಾತಿಗೆ ಮರುಳಾಗಿ ಮೋಸ ಹೋಗಿದ್ದ ಮೂಕಾಂಬೆಯ ಅಣ್ಣಯ್ಯ ಹಾಗೂ ತಂದೆಗೆ ಶ್ರೀಪತಿಯ ನಿಜ ಬಣ್ಣ ತಿಳಿಯಲು ತಿಂಗಳೂ ಬೇಕಾಗಲಿಲ್ಲ. ಹದಿನೈದು ದಿನಕ್ಕೊಮ್ಮೆ ಉಕ್ಕೇರುವ ಆತನ ಹುಚ್ಚುತನ ಮೂಕಾಂಬೆಯ ಜೊತೆಗೆ ಅವಳ ತವರನ್ನೂ ಮಂಕಾಗಿಸಿಬಿಟ್ಟಿತು. ತಿಂಗಳಲ್ಲಿ ಹದಿನೈದು ದಿನ ಮಂಕಾಗಿ ಕುಳಿತಿದ್ದು, ತನಗರಿತ ಕೆಲಸ ಕಾರ್ಯ ಮಾಡಿಕೊಂಡಿರುತ್ತಿದ್ದ ಶ್ರೀಪತಿ ತಿಂಗಳು ಕಳೆಯುವುದರೊಳಗೆ ಬುದ್ಧಿಭ್ರಮಣೆಗೊಳಗಾಗಿ ಅಸಂಬದ್ಧವಗಿ ವರ್ತಿಸುತ್ತಿದ್ದ. "ಕೂಸೆ ಎಂತ ಕೇಳ್ತೆ ನೀನು....ಹುಣ್ಣಿಮೆ ಅಮಾವಾಸ್ಯೆಗೆಲ್ಲಾ ಹುಚ್ಚೇರಿ ಸರ ಸರನೆ ತೆಂಗಿನ ಮರ, ಅಡ್ಕೆ ಮರ ಹತ್ತಿ ಬರ ಬರನೆ ಕಾಯೆಲ್ಲಾ ಉದ್ರಿಸಿ ಹಾಕ್ತಿದ್ದ.... ಓಡೋಗಿ ಎಲ್ಲಾ ಅವ್ನ ಎಳ್ಕ ಬರಕಾಗಿತ್ತು. ಆಗಿನ ಕಾಲ್ದಲ್ಲಿ ಸುಟ್ಟ್ ಕುಮ್ಟೇಲೂ ಹುಚ್ಚಿನ ಡಾಕ್ಟ್ರ ಇದ್ದಿದ್ನಿಲ್ಲೆ. ಅದ್ರ ಕಷ್ಟ ನೋಡಲಾಗ್ದೇ ನಂಗವೇ ಎಂಥದೋ ಹಳ್ಳಿ ಔಷ್ದಿನೇ ಮಾಡ್ಸಿ ನೋಡ್ದೋ.. ಆದ್ರೂ ಕಡ್ಮೆ ಆಜಿಲ್ಲೆ...ಹದ್ನೆಂಟು ವರ್ಷಕ್ಕೇ ಮೂಕಾಂಬೆಗೆ ಅರ್ವತ್ತಾದಾಂಗೆ ಅನಿಸ್ತಿತ್ತು. ಚಿಂತೆ ಮಾಡಿ ಮಾಡಿ ಮಾವ್ನೋರು ಹಾಸ್ಗೆ ಹಿಡ್ದಾಗಿತ್ತು ನೋಡು. ಮಧ್ಯೆ ಎರ್ಡು ಪುಟ್ಟ ಗಂಡು ಮಕ್ಕ ಬೇರೆ. ಎಂತ ಮಾಡ್ತೆ ಹೇಳು? ನಿನ್ನಜ್ಜ ಮಾಡ್ದೇ ಹೋದ ಪೂಜೆಯಿಲ್ಲೆ...ಊಹೂಂ ಎಂತೂ ಪ್ರಯೋಜ್ನ ಆಜಿಲ್ಲೆ... ಪಾಪ ಅವ್ನ ಹುಚ್ಚಿಗೋ ಇಲ್ಲ ಮೂಕಾಂಬೆ ವ್ಯಸನಕ್ಕೋ ಕೊನೆ ಹೇಳು ಹಾಂಗೆ ಇಪ್ಪತ್ನಾಲ್ಕು ವರ್ಷಕ್ಕೇ ಮೂಕಾಂಬೆಕೆ ಗಂಡ ಹೇಳಂವ ಇಲ್ಲಗಿದ್ದಾಂಗಾದ..ಇದ್ರ ನರ್ಕಕ್ಕೆ ದೂಡಿ ತಾನು ಸತ್ತು ಸ್ವರ್ಗ ಸೇರ್ದ...ಹ್ಮ್ಂ... ಮೊದ್ಲಾದ್ರೂ ಎನು ಸುಖಾ ಇತ್ತು ಹೇಳಿ ಇದು ದುಃಖ ಪಡವು ಹೇಳು.. ಸ್ವಲ್ಪ ದಿನ ಇಲ್ಲೇ ಇತ್ತು ನಂಗ್ಳ ಜೊತೆಗೆ.. ಎರ್ಡು ಗಂಡುಮಕ್ಕನೂ ಇಲ್ಲೇ ಶಾಲೆಗೆ ಹೋಗ್ತಿದ್ದೋ..." ಎಂದು ಸರಸಮ್ಮ ಕಣ್ಣೀರೊರೆಸಿಕೊಂಡಾಗ ಪಾವನಿಯ ಕಣ್ಣಂಚೂ ಒದ್ದೆಯಾಗಿತ್ತು.

ಗಂಡ ಸತ್ತ ಮರುದಿವಸವೇ ಮೂಕಾಂಬೆ ತವರಿಗೆ ಬಂದಿದ್ದಳು. ಮಗಳ ದುರ್ಗತಿ ಕಂಡು ದೊಡ್ಡ ಜೋಯಿಸರು ಅತೀವ ದುಃಖ ಪಟ್ಟರೂ ಹಳೆಕಾಲದ ಸಂಪ್ರದಾಯ ಮಾತ್ರ ಮರೆಯಲಿಲ್ಲ. ಮೊದಲಿನಿಂದಲೂ ಮೂಕಾಂಬೆಗೆ ತನ್ನ ಮಾರುದ್ದದ ಕೂದಲ ಮೇಲೆ ಅತೀವ ಅಭಿಮಾನ. ಬಿಗಿಯಾಗಿ ಒಂದು ಜಡೆಹಾಕಿದರೆ ಅದು ಕರಿನಾಗರದಷ್ಟು ಉದ್ದವಾಗುತ್ತಿತ್ತು. ಮಿರಮಿರನೆ ಮಿಂಚುವ ಆ ಕೂದಲನ್ನು ಮೊಗ್ಗಿನದಂಡೆಗಳಿಂದ ಅಲಂಕರಿಸುವುದೆಂದರೆ ಅವಳಿಗದೆಂಥದೋ ಸಂತೋಷ. ಆದರೆ ವೈಧವ್ಯ ಅವಳ ಆ ಜಡೆಯ ಸುಖಕ್ಕೂ ಕತ್ತರಿ ಹಾಕಿತ್ತು. "ಅಪ್ಪಯ್ಯ ಬ್ಯಾಡ... ಈಗ ಕಾಲ ಬದ್ಲಾಜು.. ಮೂಕಾಂಬೆಗೆ ಮನಸ್ಸಿಲ್ಲೆ ಅಂದ್ರೆ ಬಿಟ್ಬುಡು.. ಪಾಪ ಬಡವೆ ಮೊದ್ಲೇ ಬೇಜಾರದಲ್ಲಿದ್ದು.. ಕೂದ್ಲೆಲ್ಲಾ ತೆಗ್ಸದು ಬೇಡ.."ಎಂದು ಗೋಗರೆದ ಮಗನ ಮಾತಿಗೂ "ಅತ್ಗೆ ನೀನಾದ್ರೂ ಹೇಳೆ.. ನಾ ಬಳೆ, ಕುಂಕಮ, ಹೂವು ಎಲ್ಲಾ ಬಿಡ್ತಿ ಆದ್ರೆ ಈ ಕೂದ್ಲೊಂದು ತೆಗ್ಸದು ಬ್ಯಾಡ ಹೇಳೆ.. ಕೈ ಮುಗಿತಿ.." ಎಂದು ಗೋಳಾಡಿದ ಮಗಳ ದುಃಖವನ್ನೂ ಮರೆತು.."ಮಾವಯ್ಯ ಯಾರೇನಾರ ಹೇಳ್ಕಳ್ಲಿ..ಎಲ್ಲದಕ್ಕಿಂತ ಮೂಕಾಂಬೆ ದುಃಖ ದೊಡ್ಡದು ಇದೆಲ್ಲಾ ಬೇಡ.." ಎಂದು ಮೊದಲಬಾರಿ ಎದುರು ನಿಂತು ಮಾತಾಡಿದ ಸೊಸೆಯ ಮಾತನ್ನೂ ಮೀರಿ ದೊಡ್ಡ ಜೋಯಿಸರು ಹಠ ಹೊತ್ತು ಆ ಸುಂದರ ಕೇಶರಾಶಿಯನ್ನು ಹೊಳೆಪಾಲು ಮಾಡಿಬಿಟ್ಟರು. "ನಿನ್ನ ಕೂದ್ಲಿಂದ ನೀರು ತೊಟ್ಟಿಕ್ಕಿರೆ ನಮ್ಗೆ ಒಳ್ಳೇದಾಗ್ತಿಲ್ಲೆ..ಒಂದೋ ನೀ ಕೂದ್ಲು ತೆಗ್ಸು.. ಇಲ್ಲಾ ನಾ ಊಟ, ಆಸರಿ ಬಿಟ್ಟು ಪ್ರಾಣ ಬಿಡ್ತಿ.." ಎಂದು ಪಣ ತೊಟ್ಟ ಅಪ್ಪನ ಮುಂದೆ ಕೊನೆಗೂ ಮಗಳು ತಲೆಯೊಡ್ಡಿದ್ದಳು. ಅವಳ ಬದುಕು ಅಲ್ಲಿಗೆ ಸಂಪೂರ್ಣ ಬೋಳಾಗಿಹೋಯಿತು. ತಂಗಿಯ ಸಂತೋಷಕ್ಕಾಗಿ ಈ ಒಂದು ಸಂಪ್ರದಾಯವನ್ನಾದರೂ ತಡೆಯಬೇಕೆಂದು ಎಣಿಸಿದ್ದ ನರಸಿಂಹ ಜೋಯಿಸರಿಗೆ ಅತೀವ ನಿರಾಸೆ ದುಃಖಗಳಾದವು. ತದನಂತರ ಅವರಿಗೆ ಮೂಕಾಂಬೆಯ ಮೊಗನೋಡುವುದೇ ಕಷ್ಟವಾಗಿ ಹೋಯಿತು. ಅಂತೆಯೇ ಆಕೆಗೂ ಅಣ್ಣನ ನೋವಿನ ಅರಿವಾಗಿ, ಆದಷ್ಟು ಅವರ ಎದುರಿಗೆ ಬರುವುದನ್ನೇ ಕಡಿಮೆ ಮಾಡತೊಡಗಿದಳು. ಅವರಿಬ್ಬರ ಹೆಚ್ಚಿನ ಮಾತುಗಳೆಲ್ಲಾ ಸರಸಮ್ಮನ ಮೂಲಕವೇ ಆಗತೊಡಗಿತು.

ಮುಂದೆ ತವರು ಪಾಲಾದ ಮೂಕಾಂಬೆಯ ಆಸ್ತಿಹೊಡೆಯಲು ಅವಳ ಮೈದುನರು ಸಂಚುಹಾಕುತ್ತಿರುವುದನ್ನರಿತ ಜೋಯಿಸರು ಗಟ್ಟಿ ಮನಸುಮಾಡಿ ತಂಗಿಯನ್ನೂ ಅವಳ ಮಕ್ಕಳನ್ನೂ ಮೂರೂರಿಗೆ ತಂದು ಅವಳ ಮನೆಯಲ್ಲೇ ಬಿಡಬೇಕಾಯಿತು. ಆದರೂ ತಿಂಗಳಲ್ಲೆರಡು ಸಾರಿಯಾದರೂ ಅಲ್ಲಿಗೆ ಹೋಗಿ ಎಲ್ಲಾ ವಿಚಾರಿಸಿಕೊಂಡು ಬರುತ್ತಿದ್ದರು. ತವರು ಮನೆ ಬೆಂಬಲವೊಂದಿಲ್ಲದಿದ್ದರೆ ಅವಳಾಸ್ತಿಯನ್ನು ನುಂಗಿ ನೀರು ಕುಡಿಯುತ್ತಿದ್ದರು ಮೈದುನರು. ಮನೆಯವರ ಅಸಡ್ಡೆಗೆ, ಕೊಂಕು ನುಡಿಗೆ, ತನ್ನ ಮಕ್ಕಳಿಗಾಗುತ್ತಿರುವ ಅನ್ಯಾಯಕ್ಕೆ, ಎಲ್ಲವುದಕ್ಕೂ ಅವಳ ಉತ್ತರ ಬರಿಯ ಮೌನವಾಗಿರುತ್ತಿತ್ತು. ಅಖಂಡ ನಿರ್ಲಿಪ್ತತೆ ಅವಳ ಪಾಲಿಗೆಂದೋ ಒಲಿದಿತ್ತು. ಓದಿನಲ್ಲಿ ಮುಂದಿದ್ದರೂ ಓದಲಾಗದ ಸಂಕಟದ ಜೊತೆಗೆ, ಮನೆಯೊಳಗಿನ ಅಸಮಾನತೆ, ಪಕ್ಷಪಾತಿ ಗುಣಗಳಿಗೆಬೇಸತ್ತು ಬೆಂಗಳೂರನ್ನು ಸೇರಿ, ಯಾವುದೋ ನೌಕರಿ ಹಿಡಿದು, ಅಲ್ಲೇ ಒಂದು ಹುಡುಗಿಯನ್ನು ಮದುವೆಯಾಗಿ ನೆಲೆಸಿದ ಮೊದಲ ಮಗನ ಉದಾಸೀನತೆಗೆ, ತಮ್ಮ ಈ ಪಾಡಿಗೆ ಯಾರು ಹೊಣೆ ಎಂದು ಹುಡುಕುತ್ತಾ ಉತ್ತರ ಸಿಗದೇ ತಾನೇ ಕುದಿದು ಕುದಿದು ಬಡ ತಾಯಿಯ ಮೇಲೆ ಲಾವಾವನ್ನು ಹೊರಹಾಕಿ ದೂರಾದ ಎರಡನೆಯ ಮಗನ ನಿರ್ಲಕ್ಷತನಕ್ಕೂ ಮೂರೂರಜ್ಜಿಯದು ಈಗ ಒಂದೇ ಉತ್ತರ.."ದೇವರ ಹಣೆಯಲ್ಲಿ ಭಗವಂತ ಬರ್ದ ಹಾಂಗೆ ಆಗ್ತು.."
ವರುಷದ ಹಿಂದೆ ಊರಿಗೆ ಹೋಗಿದ್ದಾಗ ಮಾತು ಮಾತಿನ ಮೇಲೆ ಸರಸಮ್ಮ ಪಾವನಿಯಲ್ಲಿ ಹೇಳಿದ್ದರು. "ನಮ್ಮನೆ ಮೂಕಾಂಬೆ ಸ್ಥಿತಿ ನೋಡಿರೆ ಬೇಜಾರಾಗ್ತು ತಂಗಿ.. ಕಷ್ಟ ಪಟ್ಟು ಬೆಳ್ಸಿದ ಮಕ್ಕ ಹತ್ರ ಇಲ್ಲೆ. ಈಗ ಅವು ಮದ್ವೆ ಆಗಿ ಅವ್ರವ್ರ ಸಂಸಾರದಲ್ಲಿದ್ದೋ.. ಪಾಪ ಮೂಕಾಂಬೆ ಮನ್ಸು ಬಂದಾಗ ಇಲ್ಲಿಗೆ ಬಂದ್ಕತ್ತ... ಶ್ರೀಪತಿ ಕಿರಿ ತಮ್ಮನ ಮೊಮ್ಮಕ್ಳ ಆಡ್ಸಕತ್ನ ಇದ್ದು ಬಡ್ವೆ. ಇಲ್ಲೇ ಬಂದಿರು ಅಂದ್ರೂ ಅದ್ಕೆ ಮನಸಿಲ್ಲೆ.."ಇಷ್ಟು ವರ್ಷನೇ ಅಲ್ಲಿದ್ದಾಜು ಅತ್ಗೆ.. ಇನ್ನೆಂತಾ ಅಲ್ಲಿ ಇಲ್ಲಿ.. ಸುಮ್ನೇಯಾ.. ಆ ದೇವ್ರು ಈಗ್ಲಾದ್ರೂ ಅವ್ನಲ್ಲಿಗೇ ಕರ್ಸಕಂಡಿದ್ರೆ ಆರಾಮಾಗಿತ್ತು ನೋಡು.." ಹೇಳ್ತಿ ಕೊರಗತಾ ಇರ್ತು.. ಹ್ಮಂ.. ನೀ ಒಂದ್ಸಲ ಮೂರೂರಿಗೂ ಹೋಗ್ಬಾ. ನಿನ್ನ ರಾಶಿ ಕೇಳ್ತಿರ್ತು. ಸಣ್ಣಕಿರ್ಬೇಕಿದ್ರೆ ನೀನು ಅದ್ರ ಜೊತೆಗೇ ಇರ್ತಿದ್ದೆ ನೆನ್ಪಿಲ್ಯಾ.." ಎನ್ನಲು ಪಾವನಿಯ ಮನಸೆಲ್ಲಾ ಹಳೆ ನೆನಪುಗಳಿಂದ ಹಸಿರಾಗಿತ್ತು. ಮರುದಿವಸವೇ ಆಕೆ ಕುಮ್ಟೆಯ ಬಸ್ಸು ಹತ್ತಿ ಮೂರೂರನ್ನು ಸೇರಿದ್ದಳು.

ಹಿಂದೆ ಹರಿದ್ವರ್ಣ ಮರಗಳಿಂದ, ಹೂವಿನ ಗಂಧ, ಹಕ್ಕಿಗಳಿಂಚರದಿಂದ ನಳನಳಿಸುತ್ತಿದ್ದ ಕಾಡೊಂದು, ಮನುಜನ ಕ್ರೌರ್ಯಕ್ಕೆ ಬಲಿಯಾಗಿ ಬೋಳುಗುಡ್ದೆಯಾದಂತೆ ಕಾಣುತ್ತಿದ್ದ ಬೋಳು ತಲೆ, ಮಾಸಲು ಮಡಿಸೀರೆಯೊಂದನ್ನು ಸುತ್ತಿದ್ದ ಕೃಶ ಶರೀರ, ಗುಳಿ ಬಿದ್ದ ಕಳಾಹೀನ ಕಣ್ಗಳು, ವಯಸ್ಸಿನ ಪ್ರಭಾವದಿಂದಲೋ ಇಲ್ಲಾ ಬದುಕು ಕೊಟ್ಟ ಹೊಡೆತಗಳಿಂದಲೋ ತುಸು ಹೆಚ್ಚೇ ಬಾಗಿದ್ದ ಬೆನ್ನು, ಕಣ್ಣ ಕಿರಿದಾಗಿಸಿ ತನ್ನನ್ನೇ ದಿಟ್ಟಿಸಿ ನೋಡುತ್ತಾ ನಿಂತ ಮೂರೂರಜ್ಜಿಯನ್ನು ಕಂಡ ಪಾವನಿಗೆ ವಿಪರೀತ ಸಂಕಟವಾಯಿತು. ಆದರೆ ಈಗತಾನೇ ಅರಳಿದ ಹೂವಂತೆ ಕಂಗೊಳಿಸುತ್ತಿದ್ದ ಪಾವನಿಯನ್ನು ಅಚಾನಕ್ಕಾಗಿ ಅಲ್ಲಿ ಕಂಡು ಮೂಕಾಂಬೆಯ ಸಂತೋಷ ಹೇಳತೀರದು.

"ಕೂಸೆ, ನಿನ್ನಮ್ಮ ನನ್ನ ತೊಡೆಮೇಲೇ ಬೆಳ್ದಿದ್ದು. ಅತ್ಗೆಗಾದ್ರೂ ಎಲ್ಲಿತ್ತು ಪುರ್ಸೊತ್ತು ಮಕ್ಳ ಆಡ್ಸಲೆ? ಬೆನ್ನಿಗೇ ನಾಲ್ಕೈದು ಮಕ್ಕ ಆಗಿದ್ದ. ನಿನ್ನಾಯಿ ಹೆಚ್ಚಿನ ದಿವ್ಸ ಇದ್ದಿದ್ದು ಮೂರೂರಲ್ಲೇಯಾ.. ಕೇಳು ಬೇಕಿದ್ರೆ.. ಅಂತೂ ನೀನು ಈ ಮೂರೂರಜ್ಜಿ ನೆನ್ಪು ಮಾಡ್ಕಂಡು ಬಂದ್ಯಲಿ.. ಖುಶಿ ಆತು ನೋಡು.. ಈ ಮುದ್ಕಿನಾ ಮಾತಾಡ್ಸವೇ ಇಲ್ಲೆ ಈಗ..."ಎಂದು ಮುಕ್ತವಾಗಿ ನಕ್ಕರೂ ಆ ದನಿಯೊಳಡಗಿದ್ದ ವಿಷಾದ ಪಾವನಿಯನ್ನು ತಾಗಿತ್ತು.

ಬಂದ ನಾಲ್ಕು ದಿನ ಕಳೆದದ್ದೇ ಗೊತ್ತಾಗಿರಲಿಲ್ಲ ಆಕೆಗೆ. ಹೊಸ ಹುರುಪು ಬಂದಂತೆ ಮೂಕಾಂಬೆ ತನ್ನೂರನ್ನು ಸುತ್ತಿಸಿದ್ದಳು. ಅಪರೂಪವಾಗಿದ್ದ ತನ್ನ ಸ್ವಂತ ಮೊಮ್ಮಕ್ಕಳನ್ನು ಬಹುಶಃ ಪಾವನಿಯಲ್ಲಿ ಕಂಡಿದ್ದಿರಬೇಕು ಆ ಜೀವಿ. ಮೊದಮೊದಲು ತಂದೆಯೊಂದಿಗೆ ವರುಷಕ್ಕೊಮ್ಮೆಯಾದರೂ ಬರುತ್ತಿದ್ದ ಮೊಮ್ಮಕ್ಕಳು ಈಗ ತಮ್ಮ ಹೆತ್ತವರನ್ನು ಕೆಳುಹಿಸಿಕೊಟ್ಟೇ ದೊಡ್ಡುಪಕಾರ ಮಾಡುತ್ತಿದ್ದಂತಿತ್ತು. ಆಕೆಯ ಉತ್ಸಾಹ, ಸಂತೋಷ ಕಂಡು ಹಿಂತಿರುಗುವ ಅವಸರವನ್ನು ಮತ್ತೂ ಮೂರುದಿನಕ್ಕೆ ಮುಂದೂಡಿದ್ದಳು ಪಾವನಿ.

ಅಂದೂ ಹಾಗೆಯೇ ಹೊರೆಗೆ ಭೋರೆಂದು ಮಳೆ ಸುರಿಯುತ್ತಿದ್ದರೆ ಮೂರೂರಜ್ಜಿ ಬಿಸಿಬಿಸಿ ಹಲಸಿನಕಾಯಿ ಸೊಳೆ ಕರಿದು ತಂದಿಟ್ಟಿದ್ದಳು. ಬಟ್ಟಲು ತುಂಬಾ ತಿಂಡಿಯಿದ್ದರೂ ಒಂದೊಂದೇ ತಿನ್ನುತ್ತಾ ಅದೇನನ್ನೋ ಕಿವೊಯೊಳಗಿಟ್ಟುಕೊಂಡು ಗುನುಗುತ್ತಿದ್ದ ಪಾವನಿಯನ್ನು ನೋಡಿ ಮೋಜೆನಿಸಿತ್ತು ಮೂರೂರಜ್ಜಿಗೆ.
"ಕೂಸೆ ಎಂತದೇ ಅದು.. ಕೆಮಿ ಸರಿ ಕೇಳ್ಸದೇ ಹೋದವು ಹಾಕ್ಕಂಬಥಾ ವಸ್ತುನಾ ಇಟ್ಕಂಜೆ....?" ಎಂದು ಆಕೆಯನ್ನು ಕೇಳಿದಾಗ ಪಾವನಿಗೆ ನಗೆಯುಕ್ಕಿ ಬಂದಿತ್ತು.
"ಅಜ್ಜಿ ಇದು ಅದಲ್ಲ.. ಇದಕ್ಕೆ ಎಂ.ಪಿ. ತ್ರೀ ಹೇಳ್ತೋ.. ಇದ್ರಲ್ಲಿ ಚೊಲೋ ಚೊಲೋ ಹಾಡಿದ್ದು. ಈ ದಾರಾನ ಕಿವಿಗಿಟ್ಕಂಡ್ರೆ ಕೇಳ್ತು.." ಎಂದಾಗ ಆಕೆಗೆ ಅರ್ಥವೇ ಆಗಿರಲಿಲ್ಲ.
"ಎಂಥಾ ಸುಡಗಾಡೋ.. ಬಿಸಿ ಆರೋಗ್ತು ಮೊದ್ಲು ಇದ್ನ ತಿನ್ನು.. ಅಮೇಲೆ ಕೇಳ್ಲಕ್ಕು... ಅದ್ರಲ್ಲಿ ಎಲ್ಲಾ ಹಾಡೂ ಬತ್ತಾ? ಭಜನೆ ಎಲ್ಲಾ ಬತ್ತಾ?"ಎಂದು ಮುಗ್ಧವಾಗಿ ಪ್ರಶ್ನಿಸಲು ಪಾವನಿ.."ಅಜ್ಜಿ ಸದ್ಯಕ್ಕೆ ಇದ್ರಲ್ಲಿ ಭಾವಗೀತೆಗಳಿದ್ದು. ಅದ್ನೇ ಕೇಳ್ತಾ ಇದ್ದಿದ್ದಿ. ತಡಿ..ಕೊಡ್ತಿ..ಕೇಳು.."ಎನ್ನುತ್ತಾ ಆಕೆಯ ಕಿವಿಗಿಟ್ಟಿದ್ದಳು.
ಹಾಡು ಪ್ರಾರಂಭವಾಗಿ ಮುಗಿಯುವ ತನಕವೂ ಬಿಮ್ಮನೆ ಕುಳಿತಿದ್ದ ಮೂರೂರಜ್ಜಿಯ ಕಣ್ಣ ತುಂಬೆಲ್ಲಾ ನೀರು ತುಂಬಿತ್ತು. "ಕೂಸೆ ಈ ಹಾಡು ರಾಶಿ ಚೊಲೋ ಇದ್ದು.. ನಿಂಗೆ ಬರ್ತಾ ಹಾಡಲೆ? ಎಷ್ಟು ಚೊಲೋ ಹಾಡಿದ್ದು ಅದು.. ಈ ಹಾಡಿನಾಂಗೇಯಾ ನನ್ನ ಬದ್ಕೂವಾ ಅನಿಸ್ತಾ ಇದ್ದು ನೋಡು.. "ಎನ್ನಲು ಯಾವ ಹಾಡು ಬರುತ್ತಿತ್ತಪ್ಪಾ ಎಂಡು ರೆವೈಂಡ್ ಮಾಡಿ ಕೇಳಿದ್ದಳು ಪಾವನಿ.

ಬೇಸರದ ಬಯಲಿನಲಿ ಬೋಳು ಮರ ಕರೆಯುತಿದೆ
ಬನ್ನಿ ನನ್ನೆಲೆಗಳೆ ಶಿಶಿರದಲ್ಲಿ
ಕಳುಹಿಸಿದ ಪತ್ರಗಳು ತಲುಪುದಿವೋ ಇಲ್ಲವೋ
ಎಲ್ಲಿ ಗುರಿ ತಪ್ಪಿದವೋ ಇರುಳಿನಲ್ಲಿ....

ಹೊರಗೆ ಬಿರುಮಳೆ, ಒಳಗೆ ಅಜ್ಜಿಯ ಕಣ್ಣೀರು, ಕಿವಿಯೊಳಗೆಲ್ಲಾ ಹಾಡಿನ ಮೊರೆತ... ವಿಚಿತ್ರ ಸಂಕಟವಾಗಿತ್ತು ಪಾವನಿಗೆ. ಅಪ್ರಯತ್ನವಾಗಿ ಆಕೆಯ ಕೆನ್ನೆಗಳೂ ಒದ್ದೆಯಾಗಿದ್ದವು.

"ಅಯ್ಯೋ ನನ್ನ ಮಳ್ಳೇ.. ಅಪ್ರೂಪಕ್ಕೆ ಬಂದ ನಿನ್ನ ಅಳ್ಸಿದೆ. ಬೇಜಾರಾಗಡ ತಂಗಿ. ಎಂತೋ ನೆನ್ಪಾತು.. ಹೋತು. ಬಿಟ್ಬುಡು. ಹಾಂ.. ಅದೆಂತದೋ ಸುಡುಗಾಡು ಹೆಸ್ರು ಅಂದ್ಯಲೆ ಇದ್ಕೆ? ನಂಗೆ ಇದ್ನ ನೋಡಿ ಅಣ್ಣಯ್ಯ ಮೊದ್ಲನೇ ಬಾರಿ ರೇಡ್ಯೋ ತಂದ ನೆನ್ಪಾತು ನೋಡು.."ಎಂದಾಗ ಇಬ್ಬರ ಕಣ್ಗಳೂ ಮಿನುಗಿದ್ದವು.
"ಎಂತಾ ಎಡವಟ್ಟಾಗಿತ್ತು ಅಜ್ಜಿ? ಅಜ್ಜ ತಂದ ರೇಡಿಯೋ ಸರಿ ಇತ್ತಿಲ್ಯ?"
"ಕೇಳು ಕೂಸೆ.. ಆಗಿನ ಕಾಲ್ದಲ್ಲಿ ರೇಡಿಯೋ ಇಟ್ಕಂಬದೇ ದೊಡ್ಡ ಪ್ರತಿಷ್ಠೆ ಆಗಿತ್ತಾ.. ಅಣ್ಣಯ್ಯನೂ ಮನಿಗೆ ತಂದ ರೇಡಿಯೋ. ಆದ್ರೆ ಆಗೆಲ್ಲಾ ಆ ಮೂಲೆ ಊರಿಗೆ ಸರಿಯಾಗಿ ಎಲ್ಲಿ ದನಿ ಬರ್ತಿತ್ತು ಹೇಳು? ಒಂದಿನ ರ‍ೇಡ್ಯೋ ಕೇಳಿದ್ರೆ ಮರ್ದಿನ ಕೇಳ್ತಿತ್ತಿಲ್ಲೆ.. ಅಣ್ಣಯ್ಯಂಗೆ ತಲೆ ಬಿಸಿ ಆತು. ಒಂದಿನ ಕುಪ್ಪಾ ಭಟ್ರ ಮನೆಗೆ ಹೋಗಿ ಅವ್ರ ಮಗ್ನ ಎಂತ ವಿಷ್ಯ ಕೇಳ್ದಾ? ಅಂವ ದೊಡ್ಡೂರಲ್ಲಿ ಓದಿ ಬಂದವ. ಅವಂಗೆಲ್ಲಾ ಗೊತ್ತಿರ್ತು ಹೇಳಿ. ಆ ಮಾಣಿ ಅಣ್ಣಯ್ಯನ್ನ ತಮಾಷೆ ಮಾಡವು ಹೇಳಿ.."ಜೋಯ್ಸ್ರೆ.. ಅದು ‘ಸಿಗಿನೆಲ್ಲು’ ನಿಮ್ಮಲ್ಲಿಗೆ ಬಪ್ಪಲೆ ನಮ್ಮನೆ ಗೊಬ್ರದಗುಂಡಿ ದಾಟಿ ಬರವಲ್ರಾ.. ಅದ್ಕೇ ಲೇಟಾಗ್ತು.. ಅದೂ ಅಲ್ದೇ ಕೆರೆ ಬದಿ ಶಿವ ಭಟ್ರ ಮನೆ ಏರಿ ಬೇರೆ ಹತ್ತಿ ಬರವು.. ಹಾಂಗಾಗಿ ನಿಮ್ಗೆ ಸರಿ ಬತ್ತಿಲ್ಲೆ ಕಾಣ್ತು.." ಹೇಳಿ ಕಳ್ಸದ. ಆಮೇಲೆ ಗೊತ್ತಾತು ನೋಡು ಅಂವ ಮಳ್ಳು ಮಾಡಿದ್ದ ಅಣ್ಣಯ್ಯನ ಹೇಳಿ.. ಗೊತ್ತಾದಾಗ ಅಣ್ಣಯ್ಯಂಗೆ ರಾಶಿ ಸಿಟ್ಟು ಬಂದಿತ್ತು.. ಎರ್ಡು ತಾಸು ಹಾರಾಡಿದ್ದ.." ಎಂದು ನಗಲು, ಆ ನಗು ಪಾವನಿಯ ಮೊಗವನ್ನು ಸೇರಿತ್ತು. ವಾರವಿಡೀ ತನ್ನ ಮೂರೂರಜ್ಜಿಯ ಬೆನ್ನಿಗಂಟಿಕೊಂಡೇ ಕಳೆದ ಪಾವನಿ ಬೆಂಗಳೂರಿಗೆ ಹಿಂತಿರುಗುವಾಗ ಮಧುರ ನೆನಪುಗಳ ಮೂಟೆಯನ್ನೇ ಹೊತ್ತೊಯ್ದಿದ್ದಳು.

ಹಳೆಯ ನೆನಪುಗಳನ್ನು ಮೆಲುಕುತ್ತಾ, ಕಾರಂತರ ಮೂಕಜ್ಜಿಯ ಕನಸುಗಳನ್ನು ಕಾಣುತ್ತಾ, ಮೆಲುವಾಗಿ ಸಿ.ಡಿ.ಪ್ಲೇಯರ್‌ನಿಂದ ಹೊರ ಹೊಮ್ಮುತ್ತಿದ್ದ ಭಾವಗೀತೆಯನ್ನು ಆಲಿಸುತ್ತಾ ಮೈಮರೆತಿದ್ದ ಪಾವನಿಯನ್ನೆಬ್ಬಿಸಿದ್ದು ಆಕೆಯ ಮೊಬೈಲ್ ರಿಂಗ್.
"ಪಾವನಿ ನಾನು ಶಂಕ್ರಮಾವ.. ಮೂರೂರತ್ತೆಗೆ ಹಾರ್ಟ್ ಅಟ್ಯಾಕ್ ಆಗಿ ಎರ್ಡುತಾಸಿನ ಹಿಂದೆ ಹೋಗೋತಡ ಮಾರಾಯ್ತಿ..ಲ್ಯಾಂಡ್‍ಲೈನಿಗೆ ಟ್ರೈ ಮಾಡಿಟ್ಟಿ.. ಹೋಜಿಲ್ಲೆ.. ಅಮ್ಮಂಗೆ ಹೇಳ್ಬುಡು. ನಾ ಅರ್ಜೆಂಟ್ ಮೂರೂರಿಗೆ ಹೊರ್ಟಿದ್ದಿ.." ಎಂದು ಕಟ್ ಮಾಡಲು ಆಕೆಯ ಮಡಿಲಲ್ಲಿದ್ದ "ಮೂಕಜ್ಜಿಯ ಕನಸುಗಳು" ಕೆಳಗೆ ಬಿತ್ತು. ಪ್ಲೇಯರ್ -
ಮರದ ಬುಡವನು ಕೊಡಲಿ
ಕಡಿವ ಮೊದಲೇ ಬನ್ನಿ.....
ತಾಯಿ ಬೇರಿನ ತವರ ದಾರಿ ಹಿಡಿದು...
ಬೇಸರದ ಬಯಲಿನಲಿ ಬೋಳು ಮರ ಕರೆಯುತಿದೆ.. - ಹಾಡನ್ನು ಹಾಡತ್ತಲೇ ಇತ್ತು.
(ಕನ್ನಡ ಪ್ರಭ ಪತ್ರಿಕೆಯ ಸಾಪ್ತಾಹಿಕ ಪ್ರಭ ವಿಭಾಗದಲ್ಲಿ ಪ್ರಕಟಿತ)
-ತೇಜಸ್ವಿನಿ ಹೆಗಡೆ

----****----


RSS

ekaviNadeduBandaDaari

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI    ಈಕವಿ ನೆಡೆದು ಬಂದ ಹಾದಿ ಆತ್ಮೀಯ ಕನ್ನಡಿಗರೆ, ಕರ್ನಾಟಕ ಮತ್ತು ಕನ್ನಡದ ಇಂದಿನ ದುಃಸ್ಥಿತಿಯ ಅರಿವು ತಮಗೆ ಇದ್ದೇ ಇದೆ. ಅನ್ಯ ರಾಜ್ಯಗಳ ಜನಗಳು ವಲಸೆ ಬಂದು ಇಲ್ಲಿ ತಮ್ಮದೇ ಭಾಷೆ [...]

PRESS RELEASE of ekavi of Inaguration October 4th 2003

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ  ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI   For your information: Press Release FOR IMMEDIATE RELEASE IRVINE, CALIFORNIA, USA – Kannadigas are extremely happy and proud that celebrated famous author and dramatist, Former [...]

EKAVI is a Total Kannada Organization

EKAVI is a Total Kannada Organization   EKAVI NETWORK  of KANNADIGAS all over the world ಎಲ್ಲಾದರು ಇರು ಎಂತಾದರು ಇರು ಎಂದೆಂದಿಗು ನೀ ಕನ್ನಡವಾಗಿರು ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ…   Make your friends to join EKAVI for KANNADA cause. Become a Committee person to handle issues. Take your friends to the EKAVI meeting. EKAVI is an International Kannada Vedike [...]

ekavi Meeting and Directions

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI     ಈಕವಿ ಸಭೆ, ಬೆಂಗಳೂರು ನಲ್ಲಿ , ರವಿವಾರ , ಅಕ್ಟೋಬರ್ ೪ ೨೦೦೯ , ೪ ಗಂಟೆಗೆ ಇದೆ.   ಸಭೆ ನಡೆಯುವ ವಿಳಾಸ: 12, ಸುಮೇರು, ಸರ್ ಎಂ. ಏನ್. ಕೃಷ್ಣರಾವ್ ರಸ್ತೆ. ಬಸವನಗುಡಿ, ಬೆಂಗಳೂರು 560004. __________________   EKAVI [...]

NIMMA JILLEGE ekavi jothe serikondu SAHAYA maadi

ಈಕವಿ ಸಂಸ್ಥೆ ಯು ಇದುವರೆಗೂ ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ೨೦೦೩ ರರಿಂದ ಇಂದಿನವರೆಗೂ ಕನ್ನಡಕ್ಕಾಗಿ ಸೇವೆ , ಕನ್ನಡಿಗರಿಗೆ ಸಹಾಯ, ಮಾಡುತ್ತಾ ಬಂದಿದೆ. ಆದ್ದರಿಂದ ಆಸಕ್ತಿ ಇರುವ ವಿದ್ಯಾವಂತ ಯುವಕ ಯುವತಿಯರಿಗೆ ತಮ್ಮ  ತಮ್ಮ ಜಿಲ್ಲೆ, ತಾಲ್ಲೂಕು, ಹಳ್ಳಿ, ಹೋಬಳಿಗಳಿಗೆ ಏನಾದರು ಸೇವೆ ಸಲ್ಲಿಸುವ ಆಸಕ್ತಿ ಇರುವವರನ್ನು ಪ್ರೋತ್ಸಾಹಿಸಲು ಈ-ಕವಿ ವೇದಿಕೆಯು ಸಜ್ಜಿಸಲಾಗಿದೆ.   ಬೆಂಗಳೂರಿನಲ್ಲಿ, ಹೊರರಾಜ್ಯದಲ್ಲಿ ಮತ್ತು ಹೊರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರಿಗೆ ತಮ್ಮ ತಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿಗಳ ಬಗ್ಗೆ ಚಿಂತಿಸಿ, ತನ್ನನ್ನು ಬೆಳೆಸಿದ ಊರಿಗೆ ಸಹಾ [...]

Requesting VASU to put BARAHA into OPEN SOURCE, Answer to Dr. Pavanaja’s email,

Requesting VASU to put BARAHA into OPEN SOURCE, Answer to Dr. Pavanaja’s email, Answer to some of the questions raised here in the email. Dear Mr. Sheshadrivasu Chandrasekharan,   At the out set, I would like to write that our kannada association HONORED you in Southern California during the SILVER JUBLIEE CELEBRATIONS for your kannada fonts BARAHA.  I [...]

VASU BARAHA kaddu maadiddu 1997 nalli. ROOPISIDDU antha yaake helabeku?

ರಾಜ್ಯ ವಾರ್ತೆ – ತುಮಕೂರು   ಕನ್ನಡಕ್ಕೆ ಅನ್ವಯಿಕ  ತಂತ್ರಾಂಶ ಅಗತ್ಯ [Kannada Software - VASU June 2009.pdf (application/pdf) 409.00K] ಕನ್ನಡ ಪ್ರಭ ವಾರ್ತೆ , ತುಮಕೂರು , ಜೂನ್ ೧೫ ೨೦೦೯,   ಕನ್ನಡ ಭಾಷಾ ತಂತ್ರಾಂಶ ಗಳಲ್ಲಿ ಬಹುತೇಕ ತಾಂತ್ರಿಕ (ಸಾಫ್ಟ್ ವೇರ್ ಗಳಲ್ಲಿ ) ಸಮಸ್ಯೆಗಳು ಬಗೆಹರಿದಿವೆ. ಆದರೆ ಇಂಗ್ಲಿಷ್ ಭಾಷಾ ತಂತ್ರಾಂಶ ಗಳಲ್ಲಿ ರುವಂತೆ  ಕನ್ನಡದಲ್ಲೂ ವಿವಿದ ರೀತಿಯ ಅನ್ವಯಿಕ ತಂತ್ರಾಂಶ (ಅಪ್ಲಿಕೇಶನ್) ಗಳನ್ನೂ ರೂಪಿಸಬೇಕಾದ ಅಗತ್ಯವಿದೆ ಎಂದು ಉಚಿತ ಕನ್ನಡ ತಂತ್ರಾಂಶ ಬರಹದ ರೂವಾರಿ ಅಮೇರಿಕಾದ [...]

New Law needed to Protect Witnesses – Pro-whistle blower laws need to be enacted – Corruption in India is a mega industry to which public exposés are no match.

From: eGov INDIA <egovindia@gmail.com> Subject: New Law needed to Protect Witnesses – Pro-whistle blower laws need to be enacted – Corruption in India is a mega industry to which public exposés are no match. To: vnathan@nic.in Cc: “Additional Secretary Legislative DepartmentShri N.L. Meena” <nlm.ld@nic.in>, “Additional Secretary Legislative DepartmentShri V. K. Bhasin” <vkb@nic.in>, “Joint Secretary & Legislative Counsel Legislative [...]

ekavi had proposed to GoK in 2004 for Kannada Software Development

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI     EKAVI had proposed this in 2004 to GoK – in KANNADA and ENGLISH. What EKAVI had proposed in 2004 is in this [...]

Govt. School at Keradi, Kundapura Tq, Udupi Jille

ಈಕವಿ ಸರ್ಕಾರಿ ಕೆರಾಡಿ ಶಾಲಾ ದತ್ತು ತೆಗೆದುಕೊಂಡಿದೆ.   ಉಡುಪಿ ಜಿಲ್ಲಾ ಪಂಚಯಾತ್ ಹಿರಿಯ ಪ್ರಾಥಮಿಕ ಶಾಲೆ, ಕೆರಾಡಿ ಕುಂದಾಪುರ ತಾಲ್ಲೂಕು , ಉಡುಪಿ ಜಿಲ್ಲೆ, ೫೭೬೨೩೩     Date : August 8th 2009   Time : 11:00 AM   class 1 to 4 no of students :: 85 to provide :: pencil,eraser,scale,sharpner, sketch pen, class 5 to 8 no of students :: 120 to provide :: Geometry Box Scholarship for class 8,7,6,5 toppers.     ಧನ್ಯವಾದಗಳೊಂದಿಗೆ, ಈ-ಕವಿ ಕುಂದಾಪುರ   AVINAV, Ravindra Nayak, Sandhya [...]
 
 

About

KARNATAKA KANNADA KARNATAKA KANNADA created this social network on Ning.

Create your own social network!

Forum

Dr.Raju Krishna Bhat

ಪರ್ವ ಓದಿದ್ದಿರಾ? 4 Replies

Started by Dr.Raju Krishna Bhat in Uncategorized. Last reply by RAJENDRA PAVAGADA Oct 31.

Dr.Raju Krishna Bhat

ನಾನು ಓದಿದ ಕನ್ನಡ ಪುಸ್ತಕ. 7 Replies

Started by Dr.Raju Krishna Bhat in Uncategorized. Last reply by manukumar s b Oct 13.

KARNATAKA KANNADA

DASARA 2009 LIVESTREAMING

Started by KARNATAKA KANNADA in Sample Title Sep 28.

KARNATAKA KANNADA

DASARA 2009 LIVESTREAMING

Started by KARNATAKA KANNADA in Sample Title Sep 28.

KARNATAKA KANNADA

ಈಕವಿ ವತಿಯಿಂದ ವಿವಿಧ ಸ್ಪರ್ಧೆ ಗಳನ್ನು ಮಾಡುವ ಬಗ್ಗೆ. 3 Replies

Started by KARNATAKA KANNADA in Uncategorized. Last reply by ನೀಬರುವ ದಾರಿ ! ನನ್ನೊಲವಿನ ಗೋರಿ. Aug 28.

KARNATAKA KANNADA

I am a Kannadiga first, I am an Indian next,

Started by KARNATAKA KANNADA in Sample Title Aug 10.

KARNATAKA KANNADA

shaala makkalige nimma sahaya beku

Started by KARNATAKA KANNADA in Sample Title Aug 5.

KARNATAKA KANNADA

Kannada At The Crossroads - It’s judgment time 1 Reply

Started by KARNATAKA KANNADA in Sample Title. Last reply by Sudarshan(Sudhi) Aug 2.

KARNATAKA KANNADA

29 mattu 177_NETWORK of DISTRICTS and TAALOKUGALU

Started by KARNATAKA KANNADA in Sample Title Aug 1.

KARNATAKA KANNADA

NETWORK of KANNADIGAS in DIFFERENT COUNTRIES

Started by KARNATAKA KANNADA in Sample Title Aug 1.

KARNATAKA KANNADA

‘ಕಂಪ್ಯೂಟರ್ ಕೊಂಡ ಮೊದಲ ಕನ್ನಡ ಸಾಹಿತಿ’ 1 Reply

Started by KARNATAKA KANNADA in Sample Title. Last reply by Dr.Raju Krishna Bhat Jul 26.

Sudarshan(Sudhi)

kannada chitra ranga hididiruva daari? 1 Reply

Started by Sudarshan(Sudhi) in Uncategorized. Last reply by Dr.Raju Krishna Bhat Jul 24.

Notes

ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಈ ಸಭೆಯ ಪ್ರಸ್ತಾಪ.'

ನಮಸ್ಕಾರ!
ನಮ್ಮ ಯೋಜನೆಯಂತೆ ನಾವು ಮುಂದಿನ ವಾರ ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಈ ಸಭೆಯ ಪ್ರಸ್ತಾಪ.
ಈ ಶನಿವಾರ ಸಂಜೆ ೪:೦೦ ಘಂಟೆಗೆ ನಾವು ಭೇಟಿ ಮಾಡಿ ಚರ್ಚೆ ಮಾಡಬಹುದು. ದಯವಿಟ್ಟು ಈ ಸಮಯ ತೊಂದರೆಯಾದಲ್ಲಿ ತಿಳಿಸಿ.
ಸಭೆಯು ನಡೆಯುವ ಸ್ಥಳವನ್ನು ಶೀಘ್ರದಲ್ಲೇ ಪತ್ರ ಬರೆದು ತಿಳಿಸುತ್ತೇನೆ.

ಸಭೆಯಲ್ಲಿ ಚರ್ಚಿಸಬಹುದಾದ ಅಂಶಗಳು:
೧. ಯೋಜನೆಯ ನೀಲನಕ್ಷೆ
೨. ಆಯ್ಕೆ ಮಾಡಬೇಕಾದ ಶಾಲೆಗಳು
೩. ಬೇಕಾಗುವಂತಹ ಸ್ವಯಂ ಸೇವಕರ ಸಂಖ್ಯೆ, ಅವರ ಅನುಕೂಲತೆಗಳು.
೪. ಶಾಲೆಗಳ ವ್ಯಾಪ್ತಿ, ಯೋಜನೆಯ ಒಟ್ಟು ಅವಧಿ.
ನಿಮ್ಮ ಅನಿಸಿಕೆಗಳನ್ನು ತಿಳಿಸಿ. ಹಾಗೆ

Continue

Created by KARNATAKA KANNADA Jun 7, 2009 at 2:08pm. Last updated by KARNATAKA KANNADA Jun 7.

Notes Home

Welcome! To view all notes, click here. Continue

Created by KARNATAKA KANNADA Jun 7, 2009 at 9:19am. Last updated by KARNATAKA KANNADA Jun 7.

ಕನ್ನಡದಲ್ಲಿ ಕ್ರಾಂತಿ ಆಗಿರುವುದು ಏನೆಂದರೆ ಕದ್ದು ಮಾಡಿರುವ ಕನ್ನಡ ತಂತ್ರಾಂಶಗಳು.

ಕನ್ನಡದಲ್ಲಿ ಕ್ರಾಂತಿ ಆಗಿರುವುದು ಏನೆಂದರೆ ಕದ್ದು ಮಾಡಿರುವ ಕನ್ನಡ ತಂತ್ರಾಂಶಗಳು.
ವಾಸು ಬರಹ ಕದ್ದು ಮಾಡಿ ಎಲ್ಲರಿಗು ಉಚಿತವಾಗಿ ಕೊಡುವುದೇ ಒಂದು ಕನ್ನಡದ ಕ್ರಾಂತಿ.
ಕನ್ನಡ ಗಣಕ ಪರಿಷತ್ ನವರು ನುಡಿ ತಂತ್ರಾಂಶವನ್ನು ಬರಹ ದಿಂದ ಕದ್ದು ಮಾಡಿ,
ಕರ್ನಾಟಕ ಸರ್ಕಾರ ದಿಂದ ದುಡ್ಡು ಪಡೆದು ಮಾರಿರುವುದೇ ಒಂದು ಕನ್ನಡ ಕ್ರಾಂತಿ ಯಾಗಿದೆ.
ಕನ್ನಡ ಗಣಕ ಪರಿಷತ್, ಕನ್ನಡ ತಂತ್ರಾಂಶ ವನ್ನು , ಕರ್ನಾಟಕ ಸರ್ಕಾರದಲ್ಲಿ ತಪ್ಪು ದಾರಿಗೆ ಎಳೆದು , ಒಂದು ಕ್ರಾಂತಿಯನ್ನೇ ಮಾಡಿದ್ದರೆ.
ಬರಹ ಮತ್ತು ನುಡಿ ತಂತ್ರಾಂಶಗಳು, ಕನ್ನಡ ಭಾಷೆ, ಕರ್ನಾಟಕ ಸರ್ಕಾರದಲ್ಲಿ, ಆಡಳಿತ ಭಾಷೆ ಆಗುವುದಕ್ಕೆ ಎಲ್ಲ ಕಷ್ಟಗಳನ್ನು ತಂದಿವೆ.

RSS

ಎಲ್ಲದಕು ಕಾರಣನು ಈ ಯಡಿಯೂರಪ್ಪ!

’ಪದ್ಮಪ್ರಿಯ ಅಮ್ಮೋರು ಸಿಕ್ಕೋರಂತೆ!’ ಎಂದು ತಿಮ್ಮಕ್ಕ ಜಗುಲಿ ಗುಡಿಸುತ್ತ ಆಶ್ಚರ್ಯ ತೋರಿಸಿದ್ದನ್ನು ನಾನು ಅದೊಂದು ಪ್ರಶ್ನೆಯೋ ಅಥವಾ ವಿಶ್ಲೇಷಣೆಯೋ ಎಂದು ಆಲೋಚಿಸುತ್ತಾ ಏನು ಉತ್ತರ ಹೇಳಲಿ ಎಂದು ಗೊಂದಲದಲ್ಲಿದ್ದಾಗ ನನ್ನ ಸಹಾಯಕ್ಕೆ ಬಂದವನು ನಂಜ.’ತಾಯೀ, ಕೆಲ್ಸಾ ನೋಡು. ಆವಮ್ಮಾ ಯಾರ್ನೋ ಕೂಡಿಕ್ಯಂಡ್ ಗುಳೇ ಬಿದ್ದು ಹೋಗ್ಯಾಳೆ, ಅವಳು ಸಿಕ್ರೆಷ್ಟು ಬಿಟ್ರೆಷ್ಟು!’ ಎಂದು ನಂಜ ಹಂಗಿಸಿದ್ದನ್ನು ಕೇಳಿ ತನ್ನ ಕೈಲಿದ್ದ ಪೊರಕೆಯನ್ನು ಅಲ್ಲೇ ಬಿಸಾಡಿ ಸೆರಗಿನ ತುದಿಯನ್ನು ಸೊಂಟಕ್ಕೆ

ನೂರಾ ಹತ್ತು ಜನ ನೂರಾ ಹತ್ತು ಮಂತ್ರಿಗಳು!

’ಏನ್ ಮೇಷ್ಟ್ರೇ ಇತ್ಲಾಗೆ ಯಡಿಯೂರಪ್ಪ ಅಧಿಕಾರ ಹಿಡ್ದಿದ್ದೇ ತಡಾ ನೀವು ಟ್ರಂಕಿನ್ಯಾಗ್ ಇದ್ದ ಹಳೇ ರೇಷ್ಮೆ ಜುಬ್ಬಾ ತೆಕ್ಕೊಂಡು ಹಾಕ್ಕೊಂಡಿರೋ ಹಾಗಿದೆಯೆಲ್ಲಾ?’ ಎಂದು ತಮಾಷೆ ಮಾಡ್ದೋರು ಯಾರು ಅಂತ ನೋಡಿದ್ರೆ ನಂಜ ಹಲ್ಲು ಗಿಂಜಿಕೊಂಡು ಜಗಲಿ ಮೇಲಿನ ಕಂಭಕ್ಕೊರಗಿಕೊಂಡು ಕುಂತಿದ್ದ.ನಮ್ಮನೆ ಕಟ್ಟೆ ಮೇಲೆ ಮಧ್ಯಾಹ್ನ ಎರಡೂವರೆ ಎಜೆ ಬಸ್ಸು ಕಾಯೋ ಗಡಿಬಿಡಿಲಿದ್ದ ಮೇಷ್ಟ್ರು ಗಂಭೀರರಾಗೇ ಇನ್ನೂ ಕನ್ನಡಪ್ರಭದೊಳಗೆ ತಮ್ಮ ಮುಖವನ್ನು ಹೂತುಕೊಂಡಿರೋದು ಎಲೆಕ್ಷನ್ನಿನ್ನಲ್ಲಿ ಸೋತ ಗೌಡರ ಬಳಗ

ಮಾದೇಶ್ವರಗೆ ಶರಣು ಮಾದೇಶ್ವರ...

”ಹರಿ ಹಯ್ದನೆಂಬೋನು ಮಾದೇಶ್ವರಮಾದೇಶ್ವರಗೆ ಶರಣು ಮಾದೇಶ್ವರ..."ಎಂಬ ಆರ್ತನಾದ ಹಾಡಿನ ರೂಪದಲ್ಲಿ ನಮ್ಮನೆ ಮುಂದಿನ ಜಗುಲಿ ಮೇಲೆ ಕೇಳಿಬರುತ್ತಿದ್ದುದು ನೋಡಿ ಯಾರೋ ಭಿಕ್ಷುಕರು ಬಂದಿರಬೇಕೆಂದುಕೊಂಡು ಮುಂಬಾಗಿಲು ತೆಗೆದು ನೋಡಿದರೆ ನನ್ನ ಆಶ್ಚರ್ಯಕ್ಕೆ ನಂಜ ಮಧ್ಯದ ಕಂಬಕ್ಕೆ ಒರಗಿಕೊಂಡು ತನ್ನ ಪಾಡಿಗೆ ತಾನು ಹಾಡಿಕೊಳ್ಳುತ್ತಿದ್ದ. ಸ್ವಲ್ಪ ದೂರದಲ್ಲಿ ಕೊಟ್ಟಿಗೆಯಲ್ಲಿ ಕಸ ಹೊಡೆಯುತ್ತಿದ್ದ ತಿಮ್ಮಕ್ಕ ತನಗೇನೂ ಆಗೇ ಇಲ್ಲವೆನ್ನುವಂತೆ ತನ್ನ ಪಾಡಿಗೆ ತಾನಿದ್ದರೆ ಮತ್ತೊಂದು ಕಡೆ ಕೋಡೀಹಳ್ಳಿ

ಕುಂತೀ ಮಕ್ಕಳಿಗೆ ಎಂದಾರ ಅಧಿಕಾರ ಸಿಕ್ಕತೇನು?

’ಏನ್ ಸಾರ್, ಅಪರೂಪವಾಗೋಯ್ತು ನಿಮ್ಮ ದರುಶನಾ ಇತ್ತೀಚೆಗೆ?’ ಎಂದು ಪ್ರಶ್ನೆ ಕೇಳಿದ್ದು ನಮ್ಮ ಕೋಡೀಹಳ್ಳಿ ಮೇಷ್ಟ್ರುನ್ನ ಕುರಿತೇ. ಒಂದು ಟೈರ್‌ನಲ್ಲಿ ಕಡಿಮೇ ಗಾಳಿ ಇದ್ದೂ ಭರ್ತಿ ಜನರನ್ನು ತುಂಬಿಕೊಂಡ ಲಕ್ಷ್ಮೀ ಬಸ್ಸಿನಂತೆ ಉಸಿರೆಳುದುಕೊಂಡು ನಮ್ಮನೇ ಜಗುಲಿ ಮೆಟ್ಟಿಲನ್ನು ಹತ್ತುತ್ತಿದ್ದ ಮೇಷ್ಟ್ರು ಮುಖದಲ್ಲಿ ಅದ್ಯಾವ ನಗುವೂ ಇರಲಿಲ್ಲ ಅದರ ಬದಲಿಗೆ ದೇವೇಗೌಡರ ಮುಖದ ಅದಮ್ಯ ಶಾಂತಿಯ ಕಳೆ ಇದ್ದ ಹಾಗೆ ಕಂಡು ಬಂತು.’ಏನಿಲ್ಲ, ಸ್ವಲ್ಪ ಊರ್ ಕಡಿ ಕೆಲ್ಸಿತ್ತು ಹಂಗಾಗಿ ಬರಲಿಲ್ಲ ನೋಡ್ರಿ, ಮತ್ತೆ

ಆ ವಯ್ಯಾ ಒಂಥರಾ ಸುಟ್ಟಬದನೇ ಕಾಯಿ ಇದ್ದ ಹಾಗೆ...

ಮೇಷ್ಟ್ರು, ತಿಮ್ಮಕ್ಕ, ನಂಜ ಹಾಗೂ ನಾನು ಎಲ್ಲರೂ ಛಳಿಗಾಲದ ರಜೆಗೆ ಗೂಡು ಸೇರಿಕೊಂಡಿದ್ದೇವೆ - ಯಡಿಯೂರಪ್ಪ, ಪಾಪ ಒಂದೇ ವಾರ ಖುರ್ಚಿ ಮೇಲೆ ಕೂತಿದ್ರು ಅಂತ ತಿಮ್ಮಕ್ಕ ಒಂದೇ ಒಂದು ಕಣ್ಣಿನಿಂದ ಅತ್ತಂತೆ ಮಾಡಿದಳು ಎನ್ನುವುದನ್ನು ಬಿಟ್ಟರೆ ಉಳಿದ ನಾವ್ಯಾರು ಅಷ್ಟೊಂದು ತಲೆಕೆಡಿಸಿಕೊಂಡಂತಿಲ್ಲ.ಮುಂದಿನ ವರ್ಷ ಬರೋ ಚುನಾವಣೆ ಹೊತ್ತಿಗೆಲ್ಲಾ ಛಳಿ ಕಳೆದುಕೊಂಡ ಕರಡೀ ಹಾಗೆ ನಾವೆಲ್ಲ ಮತ್ತೆ ಬರ್ತೀವಿ ನಮ್ಮ ನಮ್ಮ ವರಸೆಗಳನ್ನ ಬಳಸಿಕೊಂಡು ಮಾತನಾಡಲಿಕ್ಕೆ. ಈ ರಾಜ್ಯಪಾಲ ರಾಮೇಶ್ವರ ಠಾಕೂರ್ ಬಗ್ಗೆ ಏನ್

Badge

Loading…
 

© 2009   Created by KARNATAKA KANNADA on Ning.   Create Your Own Social Network

Badges  |  Report an Issue  |  Privacy  |  Terms of Service